ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಿದ್ಧಪಡಿಸಿದ್ದ ಬಾಡೂಟ ವಶ

Srinivasa Murthy VN
Updated On : 1 Apr 2013, 12:32 pm

ಕ.ಪ್ರ. ವಾರ್ತೆ ಚಿಕ್ಕಮಗಳೂರು  ಏ.1-
ಬಾಡೂಟ ಸಿದ್ಧಪಡಿಸಿದ್ದ ಸ್ಥಳದ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳ ತಂಡ ಭಾನುವಾರ ದಾಳಿ ನಡೆಸಿ, ಊಟಕ್ಕೆ ಬಳಸಿದ್ದ ಪಾತ್ರೆಗಳು ವಶಪಡಿಸಿಕೊಂಡಿರುವ ಜತೆಗೆ ಬಿಜೆಪಿ ನಗರಸಭಾ ಸದಸ್ಯರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿದ್ದಾರೆ.
 ನಗರಸಭಾ ಸದಸ್ಯ ದೇವರಾಜ್ ಶೆಟ್ಟಿ, ಶ್ರೀನಿವಾಸ್ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ಉಂಡೇದಾಸರಹಳ್ಳಿ ವಾರ್ಡ್‌ನಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ದೇವರಾಜ್ ಶೆಟ್ಟಿ ಅವರು ಜಯಗಳಿಸಿದ್ದರು. ಅವರು ಭಾನುವಾರದಂದು ಉಂಡೇದಾಸರಹಳ್ಳಿಯಲ್ಲಿ  ಬಾಡೂಟ ಸಿದ್ಧಪಡಿಸಿ, ಅಲ್ಲಿ ಪಕ್ಷದ ಕಾರ್ಯಕರ್ತರಿಗೆ  ಹಾಗೂ ಇತರರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದರು.
ಶಾಮಿಯಾನ ತೆರವು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕವಾಗಿ ಬಾಡೂಟ ಸಿದ್ಧಪಡಿಸುವುದು ನೀತಿ ಸಂಹಿತೆಯ ವ್ಯಾಪ್ತಿಗೆ ಒಳಪಡುತ್ತದೆ. ಅದುದರಿಂದ ನೀತಿ ಸಂಹಿತೆ ಅಧಿಕಾರಿ ಶ್ರೀನಿವಾಸ್ ಅವರ ನೇತೃತ್ವದ ತಂಡ ದಾಳಿ ನಡೆಸಿ ಪಾತ್ರೆಗಳನ್ನು ವಶಕ್ಕೆ ತೆಗೆದುಕೊಂಡು, ಅಲ್ಲಿದ್ದ ಶಾಮಿಯಾನವನ್ನು ತೆರವುಗೊಳಿಸಿದ್ದಾರೆ.
 ಚುನಾವಣಾ ನೀತಿ ಸಂಹಿತೆ ಅಧಿಕಾರಿ ನೀಡಿರುವ ದೂರಿನನ್ವಯ ನಗರ ಪೊಲೀಸ್ ಠಾಣೆಯಲ್ಲಿ ದೇವರಾಜ್ ಶೆಟ್ಟಿ, ಶ್ರೀನಿವಾಸ್ ಹಾಗೂ ಇತರರ ಮೇಲೆ ಮೊಕದ್ದಮೆ ದಾಖಲು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಥಮ ಪ್ರಕರಣ ಇದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement