ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾಂಗ್ರೆಸ್ ಪ್ರಚಾರ

Lingaraj Badiger
Updated On : 2 May 2013, 11:11 am

ಶೃಂಗೇರಿ: ವಿಧಾನಸಭೆ ಚುನಾವಣೆಗೆ ಇನ್ನು ನಾಲ್ಕು ದಿನಗಳು ಬಾಕಿ ಇರುವಂತೆ ಮತಯಾಚನೆ ಚುರುಕುಗೊಂಡಿದ್ದು, ಗುರುವಾರ ಕಾಗ್ರೆಸ್ ಪರ ಉಡುಪಿ ಚಿಕ್ಕಮಗಳೂರು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ  ಮತಯಾಚಿಸಿದರು. ಬೇಗಾರು ಪಂಚಾಯಿತಿ ತಾರೋಳ್ಳಿಕೊಡಿಗೆ, ಮರ್ಕಲ್ ಪಂಚಾಯಿತಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರವನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯ ಗೋಪಾಲ್, ಉದಯ್‌ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಮತಯಾಚನೆ
ಕಡೂರು: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ್‌ರವರು ತಮ್ಮ ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.  ಪಟ್ಟಣದ 1ನೇ ವಾರ್ಡಿನಿಂದ ಹಲವಾರು ವಾರ್ಡುಗಳಲ್ಲಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆ.ಎಸ್. ಆನಂದ್, ಬ್ಲಾಕ್ ಅಧ್ಯಕ್ಷ ಎಂ.ಎಚ್. ಚಂದ್ರಪ್ಪ, ಕಡೂರು ಪುರಸಭಾ ಸದಸ್ಯರು ಮತ್ತು ಪಕ್ಷದ ಮುಖಂಡರೊಂದಿಗೆ ಪಟ್ಟಣದ ವೆಂಕಟೇಶ್ವರ ಬಡಾವಣೆ, ಛತ್ರದ ಬೀದಿ, ದೊಡ್ಡಪೇಟೆ, ಕೆ.ಎಲ್.ವಿ. ವೃತ್ತ ಸೇರಿದಂತೆ ಅನೇಕ ಕಡೆ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ನಡೆಸಿದರು.  ಮತಯಾಚನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಬಿ. ಮಲ್ಲಿಕಾರ್ಜುನ್, ಬಿಜೆಪಿ ಭ್ರಷ್ಟ ಆಡಳಿತದಿಂದ ಬೇಸತ್ತು ಕಾಂಗ್ರೆಸ್‌ನತ್ತ ಒಲವು ತೋರಿಸುತ್ತಿದ್ದಾರೆ ಎಂದರು.
 ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದೆ. ಕ್ಷೇತ್ರದಲ್ಲಿಯೂ ಮತದಾರರು ಕಾಂಗ್ರೆಸ್‌ನ್ನು ಬೆಂಬಲಿಸುತ್ತಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ವಿನಾಯಕ್, ಎಚ್.ಎಂ. ಲೋಕೇಶ್, ವಿ.ಬಿ. ಷಣ್ಮುಖಭೋವಿ, ಕೆ.ಜಿ. ಶ್ರೀನಿವಾಸಮೂರ್ತಿ, ಡಿ. ಲಕ್ಷ್ಮಣ್ ಇದ್ದರು.
ಬಿರುಸಿನ ಪ್ರಚಾರ
ಶೃಂಗೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರಾಜಕೀಯ ಪಕ್ಷ ಬಿರುಸಿನ ಪ್ರಚಾರ ನಡೆಸುತ್ತಿದೆ.   ಈಗಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಭಾಷಣ ಮುಗಿಸಿದ್ದು, ಉಳಿದಂತೆ  ಕಾರ್ಯಕರ್ತರು ಮತದಾರರ ಮನೆ ಮನೆಗೆ ತೆರಳಿ ಮನವೊಲಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪ ಮಾಡಿಕೊಳ್ಳುವುದರ ಜೊತೆಗೆ ಮತದಾರರಿಗೆ ಭರವಸೆಗಳ ಆಮಿಷ ತೋರಿಸುತ್ತಿರುವುದು ಕಂಡುಬರುತ್ತಿದೆ. ಮುಂಜಾನೆ, ಸಂಜೆ, ಹಗಲು, ರಾತ್ರಿ ಎನ್ನದೇ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಉತ್ಸಾಹದಿಂದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದೇ ಹಂತದ ಚನಾವಣೆಯಾಗಿರುವುದರಿಂದ ರಾಜ್ಯ, ರಾಷ್ಟ್ರೀಯ ನಾಯಕರು ಪಟ್ಟಣದಲ್ಲಿ ಚುನಾವಣಾ ಭಾಷಣಕ್ಕೆ ಆಗಮಿಸಲು ಸಮಯ ಸಾಲುತ್ತಿಲ್ಲ.  ತಾಲೂಕಿನಲ್ಲಿ ಮೂಲ ಸಮಸ್ಯೆಗಳಿದ್ದರೂ, ಎಲ್ಲಿಯೂ ಚುನಾವಣೆ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಂಡಿರುವುದು ಇದುವರೆಗೆ ಬೆಳಕಿಗೆ ಬಂದಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement