12 ರಂದು ನೆಮ್ಮಾರು ಉರೂಸ್
ಶೃಂಗೇರಿ: ತಾಲೂಕಿನ ನೆಮ್ಮಾರಿನ ಸೂಫಿ ಸಂತ ಹಜರತ್ ದಿಲಾವರುಷ ಔಲಿಯಾ ದರ್ಗಾದಲ್ಲಿ 12 ರಂದು ವಿಶೇಷ ಉರೂಸ್ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆಯಿಂದ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನೆರವೇರಲಿದೆ. ಸಂಜೆ 5 ಗಂಟೆಗೆ ದರ್ಗಾದ ಮುಂಭಾಗದಿಂದ ಆಕರ್ಷಕ ಝರಬ್, ದಫ್ ಕಾರ್ಯಕ್ರಮದೊಂದಿಗೆ ಸಂದಬ್ ಮೆರವಣಿಗೆ ಹೊರಟು ಪಟ್ಟಣದ ಮುಖ್ಯ ಬೀದಿಯಲ್ಲಿ ಸಾಗಲಿದೆ.ನಂತರ ದರ್ಗಾದಲ್ಲಿ ಲೋಕಕಲ್ಯಾಣಾರ್ಥ ಸಾಮೂಹಿಕ ಪ್ರಾರ್ಥನೆ ನೆರವೇರಲಿದೆ.
ನಾಥ್, ಬಯಾನಾಥ್, ತರ್ಬಿಯತ್ ಇಜ್ತಿಮಾ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.