ಸಂಹಿತೆ ಉಲ್ಲಂಘನೆ ಆರೋಪ
ನರಸಿಂಹರಾಜಪುರ: ಶೃಂಗೇರಿ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಲ್.ಮೂರ್ತಿ ಆರೋಪಿಸಿದರು.
ಅವರು ಶುಕ್ರವಾರ ಪತ್ರಿಕಾ ಗೋಷ್ಠಿ ನಡೆಸಿ, ಶೃಂಗೇರಿ ಕ್ಷೇತ್ರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು, ಸರ್ಕಾರಿ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಮತದಾರರಿಗೆ ಹಣ ಪಂಚಲು ನಿರ್ದಿಷ್ಟ ಜಾಗದಲ್ಲಿ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ ಎಂದರು.