ಸರಬ್ಜಿತ್ ಸಿಂಗ್ ನಿಧನಕ್ಕೆ: ಸಂತಾಪ
ತರೀಕೆರೆ: ಪಾಕಿಸ್ಥಾನದ ಜೈಲಿನಲ್ಲಿ ಸಹ ಖೈದಿಗಳಿಂದ ತೀವ್ರ ಹಲ್ಲೆಗೆ ಒಳಗಾಗಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಪಾಕಿಸ್ತಾನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಅವರ ಸಾವಿಗೆ ಬಿಜೆಪಿ ತಾಲೂಕು ಅಧ್ಯಕ್ಷ ಆರ್. ದೇವಾನಂದ್ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ವಿದೇಶಾಂಗ ಕಚೇರಿ ಈ ಬಗ್ಗೆ ಕೂಲಂಕುಶ ತನಿಖೆ ನೆಡೆಸಿ ಪಾಕಿಸ್ಥಾನದ ಸರ್ಕಾರದ ಮೇಲೆ ರಾಜತಾಂತ್ರಿಕ ಒತ್ತಡ ತಂದು ಮೃತರ ಸಾವಿನ ಬಗ್ಗೆ ಸೂಕ್ತ ತನಿಖೆ ನೆಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ
ನರಸಿಂಹರಾಜಪುರ: ಮೂಡಬಾಗಿಲಿನ ಪವಿತ್ರ (18) ಎಂಬ ವಿದ್ಯಾರ್ಥಿನಿ ತನ್ನ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡು ಘಟನೆ ಗುರುವಾರ ಸಂಜೆ ನಡೆದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಪವಿತ್ರ ಪರೀಕ್ಷೆ ಬರೆದಿದ್ದಳು. ಅಂಕ ಕಡಿಮೆಯಾಗುವುದಾಗಿ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು.