ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹಲ್ಲೆ ಖಂಡಿಸಿ ಕಾಂಗ್ರೆಸ್ ಮೌನ ಮೆರವಣಿಗೆ

Lingaraj Badiger
Updated On : 7 May 2013, 10:41 am

ಕ.ಪ್ರ.ವಾರ್ತೆ, ನರಸಿಂಹರಾಜಪುರ,  ಮೇ 6
ಚುನಾವಣೆಯ ಹಿಂದಿನ ದಿನವಾದ ಶನಿವಾರ ರಾತ್ರಿ ಮುತ್ತಿನಕೊಪ್ಪದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರ  ಮೇಲೆ ಬಿಜೆಪಿ ಮುಖಂಡರು ಹಲ್ಲೆ ನಡೆಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ನಂತರ ಕೆಲ ಸಮಯ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.
ಕಾಂಗ್ರೆಸ್ ಕಚೇರಿಯಿಂದ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಹಳೇ ಮಂಡಗದ್ದೆ ಸರ್ಕಲ್‌ವರೆಗೆ ಮೌನ ಮೆರವಣಿಗೆ ನಡೆಸಿದರು. ನಂತರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ, ಬಾಳೆಮನೆ ನಟರಾಜ್, ಬಿ.ಸಿ. ಗೀತಾ, ಅದಿಲ್, ಚೆನ್ನಗಿರಿ, ಎಚ್.ಜಿ. ವೆಂಕಟೇಶ್ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಆರಕ್ಷಕ ವೃತ್ತ ನಿರೀಕ್ಷಕ ಕೃಷ್ಣಮೂರ್ತಿ ಭರವಸೆ ನೀಡಿದ ನಂತರ ಧರಣಿ ನಿಲ್ಲಿಸಿದರು. ಧರಣಿಯಲ್ಲಿ ಕಾಂಗ್ರೆಸ್ ಪಕ್ಷದ ಡಾ.ಕೆ. ಅಂಶುಮಂತ್, ಕೆ.ಎಂ. ಗಂಗಾಧರ್, ಸಚಿನ್ ಮೀಗ, ಅಪ್ರೋಜ್, ಟಿ.ವಿ. ರಾಜು, ಲೇಖಾ ವಸಂತ್, ಕೆ.ವಿ. ವಸಂತಕುಮಾರ್, ಆರ್. ಸದಾಶಿವ ಮತ್ತಿತರರು ಇದ್ದರು.
ಬಿಜೆಪಿ ಯಿಂದ ಹಲ್ಲೆ; ಆರೋಪ: ನಂತರ ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಮಾತನಾಡಿ, ಚುನಾವಣೆಯ ಹಿಂದಿನ ದಿನ ಕ್ಷೇತ್ರದ ಹಲವು ಕಡೆ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿತ ಸಂಘಟನೆಗಳ ಮೇಲೆ ಬಿಜೆಪಿಯವರು ಹಲ್ಲೆ ನಡೆಸಿದ್ದಾರೆ.
ಶೃಂಗೇರಿ ಸಮೀಪದ ಮೆಣಸೆ ಎಂಬಲ್ಲಿ ಪ್ರಜಾ ಪರಿಷತ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಮಾರಕಾಸ್ತ್ರಗಳಿಂದ ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ. ಈ ಬಗ್ಗೆ ಶೃಂಗೇರಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೊಪ್ಪ ತಾಲೂಕಿನ ಬಂಡಿಗಡಿಯಲ್ಲಿ ನವೀನ್ ಕರವಾನೆ, ಕಮಾಲಿಯಾ, ಕಾಮತ್ ಎಂಬವರ ಮೇಲೆ ಪ್ರಚಾರದ ಸಂದರ್ಭದಲ್ಲಿ ಅವರ ಕಾರನ್ನು ಅಡ್ಡಗಟ್ಟಿ ಥಳಿಸಿ ಕೊಲೆ ಬೆದರಿಕೆ ಹಾಕಲಾಗಿದೆ. ಕಾರಿನಲ್ಲಿರುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಮುತ್ತಿನಕೊಪ್ಪದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಹಾಗೂ ಮುಖಂಡ ಸುಬ್ರಮಣ್ಯ ಅವರಿದ್ದ ಕಾರಿನ ಮೇಲೆ ದೊಣ್ಣೆಯಿಂದ ಹೊಡೆದು ಜಕಂ ಮಾಡಿದ್ದಾರೆ.  ಬಿದರಿ ಗ್ರಾಮದಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು 2 ವಾಹನದಲ್ಲಿ ಬಂದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರೂ ಕ್ರಮ ತೆಗೆದುಕೊಂಡಿಲ್ಲ.
ಈ ಎಲ್ಲಾ ಹಲ್ಲೆ ಮಾಡಿದ ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ಕಾನೂನಿನಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಧರಣಿ ನಡೆಸಿದ್ದು, ಆರಕ್ಷಕ ವೃತ್ತ ನಿರೀಕ್ಷಕರು ಕ್ರಮ ತೆಗೆದಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಧರಣಿ ಹಿಂತೆಗೆದುಕೊಳ್ಳಲಾಗಿದೆ ಎಂದು ಟಿ.ಡಿ. ರಾಜೇಗೌಡ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement