ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಮಕ್ಕಳಿಗೆ ವಿದ್ಯಾರ್ಥಿ ವೇತನ
ಶಿವಮೊಗ್ಗ: ಕೆ.ಆರ್. ಗಾಯಿತ್ರಿ ಮೆಮೋರಿಯಲ್ ಅಸೋಸಿಯೇಷನ್ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನಮ ನೀಡಲು ನಿರ್ಧರಿಸಿದೆ.
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತೀರ್ಣರಾಗಿ, ಪದವಿಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ಓದಲು ಇಚ್ಛಿಸುವ 15 ಜನ ವಿದ್ಯಾರ್ಥಿನಿಯರು ಸ್ಕಾಲರ್ ಶಿಪ್ ಪಡೆಯಲು ಅರ್ಹರಾಗಿರುತ್ತಾರೆ.
ಎಸ್ಎಸ್ಎಲ್ಸಿಯಲ್ಲಿ ಸಂಸ್ಕೃತ ಓದಿದಂತಹ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಓದುವಂತಹ ವಿದ್ಯಾರ್ಥಿನಿಯರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತರು ಮೇ 31ರೊಳಗೆ ತಮ್ಮ ಹೆಸರನ್ನು ನೋಂದಾಯಿಸಬಹುದು ಎಂದು ಅಸೋಸಿಯೇಷನ್ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಗಳಿಗಾಗಿ- 9844642586.