ದ್ವಿತೀಯ ಪಿಯುಸಿ ಫಲಿತಾಂಶ: ಬಾಲಕಿಯರದ್ದೇ ಮೇಲುಗೈ
ಕಪ್ರವಾರ್ತೆ,ಚಿಕ್ಕಮಗಳೂರು,ಮೇ 7
ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ 5 ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 9,004 ವಿದ್ಯಾರ್ಥಿಗಳಲ್ಲಿ 7,025 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 78.02 ಫಲಿತಾಂಶ ಬಂದಿದೆ.
ಶೇ.65: ಪರೀಕ್ಷೆಗೆ ಕುಳಿತ 4886 ಬಾಲಕರಲ್ಲಿ 3207 ತೇರ್ಗಡೆ ಹೊಂದಿದ್ದು, ಶೇ. 65 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಪರೀಕ್ಷೆ ತೆಗೆದುಕೊಂಡಿದ್ದ 5820 ಬಾಲಕಿಯರಲ್ಲಿ 4362 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 75 ರಷ್ಟು ಫಲಿತಾಂಶ ಬಂದಿದೆ. ಬಾಳೆಹೊನ್ನೂರಿನ ಬಿಜಿಎಸ್ ಪದವಿಪೂರ್ವ ಕಾಲೇಜು ಶೇ. 100 ರಷ್ಟು ಫಲಿತಾಂಶ ಪಡೆದುಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ 1984 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 1488 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅಂದರೆ, ಶೇ. 75 ರಷ್ಟು, ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ 2332 ವಿದ್ಯಾರ್ಥಿಗಳಲ್ಲಿ 2236 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 84.95 ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 4,388 ವಿದ್ಯಾರ್ಥಿಗಳಲ್ಲಿ 3,301 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ. 75.23 ಫಲಿತಾಂಶ ಬಂದಿದೆ.
ತರೀಕೆರೆ: ಶೇ.79.5
ತರೀಕೆರೆ: ಈ ಭಾರಿ ಪ್ರಕಟಗೊಂಡ ಪಿ.ಯು.ಸಿ.ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಬಾಲಕೀಯರ ಪ.ಪೂ.ಕಾಲೇಜಿಗೆ ಶೇ.79.5ರಷ್ಟು ಫಲಿತಾಂಶ ದೊರಕಿದೆ ಎಂದು ಪ್ರಾಚಾರ್ಯ
ರುದ್ರೇಶ್ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಒಟ್ಟು 385 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಅದರಲ್ಲಿ 307 ವಿದ್ಯಾರ್ಥಿಗಳು ಉತ್ತ್ತೀರ್ಣರಾಗಿದ್ದು, ವಿಜ್ಞಾನ ವಿಭಾಗದಲ್ಲಿ 80,1, ಕಲಾ ವಿಭಾಗದಲ್ಲಿ 79 ಮತ್ತು ವಾಣಿಜ್ಯ ವಿಭಾಗದಲ್ಲಿ
81.5 ರಷ್ಟು ಫಲಿತಾಂಶ ದೊರಕಿದ್ದು, ಮೂರು ವಿಭಾಗಗಳಿಂದ 6 ಅತ್ಯುನ್ನತ ಶ್ರೇಣಿ, 110 ಪ್ರಥಮ ಶ್ರೇಣಿ, 86 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 105 ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಗೆ ದ್ವಿತೀಯ ಸ್ಥಾನ- ವಿಜ್ಞಾನ ವಿಭಾಗದಲ್ಲಿ ಟಿ.ಜಿ. ಸಂಜನ ಮಾಳತ್ಕರ್ 579 ಅಂಕ ಗಳಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಮತ್ತು ಜಿಲ್ಲೆಗೇ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವೈಭವ 550, ನಯನ 541, ಕೆ.ಸ್ನೇಹ 535, ಝೇಬಾ ಫಿರ್ದೋಸ್ 535, ಫರನಾಜ್ 531 ಅಂಕ ಗಳಿಸಿ ಅತ್ಯುನ್ನತ ಸ್ಥಾನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಾ ವಿಭಾಗದಲ್ಲಿ ಲಾವಣ್ಯ 496 ವಾಣಿಜ್ಯ ವಿಭಾಗದಲ್ಲಿ ಸಿಂದೂಶ್ರೀ 483, ಶ್ರೀತ ಎನ್. 483 ಅಂಕ ಪಡೆದು ಪ್ರಥಮ ಶ್ರೇಣಿಯನ್ನು ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೀರೂರು: ಶೇ.72.01
ಬೀರೂರು: ಪಟ್ಟಣದ ಕೆಎಲ್‌ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.72.01 ಫಲಿತಾಂಶ ಪಡೆದಿದೆ.
ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 133 ವಿದ್ಯಾರ್ಥಿಗಳಲ್ಲಿ ಶೇ.92 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 4 ವಿದ್ಯಾರ್ಥಿಗಳು ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕೆ. ವಿನುತ 521 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 68 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳ ತೇರ್ಗಡೆ ಹೊಂದಿ ಇಬ್ಬರು ಅತ್ಯುತ್ತಮ ದರ್ಜೆಯೊಂದಿಗೆ ಉತ್ತೀರ್ಣರಾಗುವ ಮೂಲಕ ಶೇ.80 ಫಲಿತಾಂಶ ಪಡೆದು ಎಲ್.ಎಸ್. ವಿನೋದ 524 ಅಂಕ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 90 ವಿದ್ಯಾರ್ಥಿಗಳಲ್ಲಿ 63 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ.70ರಷ್ಟು ಫಲಿತಾಂಶ ಬಂದಿದೆ. ಒಟ್ಟಾರೆ ಪರೀಕ್ಷೆ ಬರೆದ 291 ವಿದ್ಯಾರ್ಥಿಗಳಲ್ಲಿ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ಅತ್ಯುತ್ತಮ ದರ್ಜೆಯಲ್ಲಿ 83, ಪ್ರಥಮ ದರ್ಜೆ ಮತ್ತು 56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಎನ್.ಆರ್. ಪುರ ಶೇ.98.68
ನರಸಿಂಹರಾಜಪುರ: ಮೆಣಸೂರಿನಲ್ಲಿರುವ ಮೌಂಟ್ ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.98.68 ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಉಷಾ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಒಟ್ಟು 76 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 42 ವಿದ್ಯಾರ್ಥಿಗಳು ಪ್ರಥಮ, 20 ದ್ವಿತೀಯ, 13 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗ ಶೇ.100: ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಬಂದಿದ್ದು, ಪ್ರಜೀನಾ 503 ಅಂಕ ಪಡೆದು ಕಾಲೇಜಿಗೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದಾಳೆ. ಕಲಾ ವಿಭಾಗದಲ್ಲಿ ಎಂ.ಸಿ. ಪವಿತ್ರ 496 ಅಂಕ ಪಡೆದು ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯಾಗಿದ್ದಾಳೆ.