ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತ ಎಣಿಕೆ: ನಿಷೇಧಾಜ್ಞೆ ಜಾರಿ

Vishwanath S
Updated On : 8 May 2013, 4:54 am

ಚಿಕ್ಕಮಗಳೂರು: ನಗರದ ಕೆ.ಎಂ. ರಸ್ತೆಯ ಐಡಿಎಸ್‌ಜಿ ಕಾಲೇಜಿನಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
 ಅದಕ್ಕೂ ಮುನ್ನ ಅಭ್ಯರ್ಥಿಗಳ ಮತ್ತು ಏಜೆಂಟರು ಮತ ಎಣಿಕೆ ಕೇಂದ್ರಕ್ಕೆ ಬರಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.
  ಮತ ಎಣಿಕೆ  ನಂತರ ಗೆದ್ದ ಅಭ್ಯರ್ಥಿಗಳ ಹಿಂಬಾಲಕರು ಹಾಗೂ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುವ ಸಂಭವ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತ ದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 8 ರ ಬೆಳಿಗ್ಗೆ 6 ರಿಂದ ಮೇ 10ರ ಮಧ್ಯರಾತ್ರಿ 12ರವರೆಗೆ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿ ವಿ. ಯಶವಂತ್ ಆದೇಶಿಸಿದ್ದಾರೆ.
 ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಯುವಂತಿಲ್ಲ. 4 ಜನರು ಗುಂಪಾಗಿ ಸೇರುವುದು, ಮಾರಕಾಸ್ತ್ರ ಹಿಡಿದು ಓಡಾಡುವಂತಿಲ್ಲ.
 ಬಿತ್ತಿ ಪತ್ರ ಹಂಚುವುದು, ವಾಹನದಲ್ಲಿ ಪ್ರಚಾರ, ಘೋಷಣೆ ಕೂಗುವುದು, ಭಾಷಣ ಮಾಡುವಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.
 ನಿಷೇಧಾಜ್ಞೆ ಮದುವೆ, ಮುಂಜಿ, ಶವಸಂಸ್ಕಾರ, ಸಂತೆ, ಜಾತ್ರೆ ಕಾರ್ಯಕ್ರಮಗಳಿಗೆ, ರಾಜ್ಯ ವಿಧಾನಸಭಾ ಚುನಾವಣೆಯ ಚುನಾವಣಾ ಕರ್ತವ್ಯ ನಿರತರು ಹಾಗೂ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಎಣಿಕೆ ಏಜೆಂಟರು ಎಣಿಕೆಗೆ ಹಾಜರಾಗುವವರಿಗೆ ಸೇರಿದಂತೆ ವಿಶೇಷ ಸಂದರ್ಭದಲ್ಲಿ  ಅನ್ವಯವಾಗುವುದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement