ಸಂಘಟಿತ ಹೋರಾಟಕ್ಕೆ ಸಂದ ಜಯ
ಚಿಕ್ಕಮಗಳೂರು: ಸಂಘಟಿತ ಹೋರಾಟ ಮತ್ತು ಅಭಿವೃದ್ಧಿಗೆ ಸಂದ ಜಯ ಇದಾಗಿದೆ ಎಂದು ಶೃಂಗೇರಿ ಕ್ಷೇತ್ರದಲ್ಲಿ ಜಯಗಳಿಸಿರುವ ಡಿ.ಎನ್. ಜೀವರಾಜ್ ಹೇಳಿದ್ದಾರೆ.
ಕಡಿಮೆ ಮತಗಳ ಅಂತರದಿಂದ ಜಯಗಳಿಸಿದ್ದೇನೆ. ಅಭಿವೃದ್ಧಿ ಕೆಲಸಗಳಿಗೆ ಜನ ಈ ತೀರ್ಪಿನ ಮೂಲಕ ಉತ್ತರ ನೀಡಿದ್ದಾರೆ. ಬೇರೆ ಪಕ್ಷಗಳ ಹಣ ಮತ್ತು ಅಪಪ್ರಚಾರಗಳಿಗೆ ಸೋಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ವಿರೋಧ ಪಕ್ಷದಲ್ಲಿದ್ದರೂ ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದ ಅವರು, ತಮ್ಮದು ಹ್ಯಾಟ್ರಿಕ್ ಗೆಲವು ಎಂದು ಹೇಳಿದರು.
--