ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಾರ್ಷಿಕೋತ್ಸವ

Lingaraj Badiger
Updated On : 10 May 2013, 11:55 am

ಕೊಪ್ಪ:  ಇಲ್ಲಿನ ಬಾಳಗಡಿಯ ಹೊಸಮ್ಮ ಮತ್ತು ಪರಿವಾರ ದೇವತೆಗಳ ಸಮಿತಿ ವತಿಯಿಂದ ಅಬ್ಬಿಗದ್ದೆ ಹೊಸಮ್ಮ  ಮತ್ತು ಪರಿವಾರ ದೇವರ ವಾರ್ಷಿಕೋತ್ಸವನ್ನು ಮೇ 14 ರಿಂದ 16ರ ವರಗೆ ಹಮ್ಮಿಕೊಳ್ಳಲಾಗಿದೆ. ಮೇ 14 ರಂದು ಬೆಳಗ್ಗೆ 10 ಗಂಟೆಗೆ ಗಣಪತಿ ಪೂಜೆ ದುರ್ಗಾಹೋಮ ಹಾಗೂ ಪೂರ್ಣಾಹುತಿ ನಂತರ ಪ್ರಸಾದ ವಿನಿಯೋಗ, ಮೇ15 ರ ಬೆಳಗ್ಗೆ 8 ಕೆಂಡದಾರ್ಚನೆ ನಂತರ 9ಗಂಟೆಗೆ ಮಾರಿ ಹರಕೆ ಹಾಗೂ ಪೂಜೆ, ಮೇ 16 ರಂದು ಸಂಪ್ರೋಕ್ಷಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧಾರ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ಸೇರಬೇಕಾಗಿ ಸಮಿತಿ ಮುಖ್ಯಸ್ಥರು ವಿನಂತಿಸಿದ್ದಾರೆ.
ಬಸವೇಶ್ವರ ಜಯಂತಿ ಪೂರ್ವಭಾವಿ ಸಭೆ
ನರಸಿಂಹರಾಜಪುರ: ಮೇ 13ರ ಸೋಮವಾರ ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮ ಆಚರಿಸುವ ಬಗ್ಗೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪೂರ್ವಭಾವಿ ಸಭೆಯು ಗುರುವಾರ ನಡೆಯಿತು.
ಈ ಬಾರಿ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ನಡೆಸಲು ಸಭೆ ತೀರ್ಮಾನಿಸಿತು. ಸಭಾ ಕಾರ್ಯಕ್ರಮದ ನಂತರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಾಗುವುದು. ಸಭೆಯ ಅಧ್ಯಕ್ಷತೆಗೆ ಶಾಸಕ ಡಿ.ಎನ್. ಜೀವರಾಜ್ ಅವರನ್ನು ಆಹ್ವಾನಿಸುವುದು.
ಬಸವ ಕೇಂದ್ರದ ಸಂಚಾಲಕ ಪುಟ್ಟಸ್ವಾಮಿ ಅವರಿಂದ ಉಪನ್ಯಾಸ ಏರ್ಪಡಿಸುವುದು ಹಾಗೂ ವಚನ ಗಾಯನ ಕಾರ್ಯಕ್ರಮ ನಡೆಸಲು ಸಭೆಯ್ಲಲಿ ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ತಹಸೀಲ್ದಾರ್ ಕೃಷ್ಣಮೂರ್ತಿ ವಹಿಸಿದ್ದರು. ಸಭೆಯಲ್ಲಿ ಬಸವ ಸಮಿತಿ ಅಧ್ಯಕ್ಷ ಶಾಂತರಾಜ್, ತಾಲೂಕು ದೈಹಿಕ ಪರಿವೀಕ್ಷಕ ಕೆ. ಮೌನೇಶ್ವರಾಚಾರ್, ಸಿಡಿಪಿಓ ಜ್ಯೋತಿಲಕ್ಷ್ಮಿ,ತಾಲೂಕು ಪಂಚಾಯ್ತಿಯ ರಾಜೇಗೌಡ, ಪೊಲೀಸ್ ಠಾಣಾಧಿಕಾರಿ ಜಯ, ವಲಯ ಅರಣ್ಯಾಧಿಕಾರಿ ಕೇಶವಮೂರ್ತಿ ಇದ್ದರು.
ಕಡೂರಲ್ಲಿ ವ್ಯಕ್ತಿ ಆಧಾರಿತ ರಾಜಕಾರಣ: ಟೀಕೆ
ಬೀರೂರು: ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ವ್ಯಕ್ತಿ ಆಧಾರಿತ ರಾಜಕಾರಣಕ್ಕೆ ಆದ್ಯತೆ ನೀಡುವ ಮೂಲಕ ಜನಪ್ರತಿನಿಧಿಯನ್ನು ಚುನಾಯಿಸಿದ್ದರಿಂದ ಕಾಂಗ್ರೆಸ್ ಹಿನ್ನೆಡೆಗೆ ಕಾರಣವಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ಹೇಳಿದರು.                                                              
ಬೀರೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಕಡೂರು ಕ್ಷೇತ್ರದ ಹಲವು ಭಾಗಗಳಲ್ಲಿ ಕಾಂಗ್ರೆಸ್ ಗೆಲವಿನ ಸಮೀಪದಲ್ಲಿ ಸೋತಿದ್ದರೂ ಉತ್ತಮ ಸಾಧನೆ ಮಾಡಿದೆ.
ಪಕ್ಷದ ಅಭ್ಯರ್ಥಿಯಾಗಿದ್ದ ಕೆ.ಬಿ. ಮಲ್ಲಿಕಾರ್ಜುನ್ ಅವರಿಗೆ ಮತದಾರರು ಹೆಚ್ಚಿನ ಮತಗಳನ್ನು ನೀಡಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ ಸ್ಪರ್ಧಿಸಿದ್ದ ಇತರೆ ಕಾಂಗ್ರೆಸ್ ಅಭ್ಯರ್ಥಿಗಳಿಗೂ ಉತ್ತಮ ಮತ ನೀಡಿದ್ದಾರೆ ಎಂದು ಕೃತಜ್ಞತೆ ಅರ್ಪಿಸಿದರು.

ಕುಡಿವ ನೀರಿಗೆ ಮೊದಲ ಆದ್ಯತೆ; ಶ್ರೀನಿವಾಸ್
ತರೀಕೆರೆ: ತಾಲೂಕಿನಾದ್ಯಂತ ಶುದ್ಧ ಕುಡಿಯುವ ನೀರು ಸರಬರಾಜಿಗೆ ತಾವು ಮೊದಲ ಆದ್ಯತೆ ನೀಡುವುದಾಗಿ ವಿಧಾನಸಭಾ ಕ್ಷೇತ್ರದ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಡನೆ ಮಾತನಾಡಿ, ತಾಲೂಕಿನ ಎಷ್ಟು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜಾಗುತ್ತಿದೆ ಎನ್ನುವ ಕುರಿತು ತಾವು ಜಿಲ್ಲಾಧಿಕಾರಿಗಳ ಜೊತೆ ಈಗಾಗಲೇ ಚರ್ಚಿಸಿ ಅದರ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ. ಎಲ್ಲರ ಸಹಕಾರದಿಂದ ತಾಲೂಕನ್ನು ಶಾಶ್ವತ ನೀರಾವರಿ ಒದಗಿಸುವತ್ತ ತಾವು ಎಲ್ಲ ರೀತಿಯಲ್ಲೂ ಪ್ರಯತ್ನಿಸುವುದಾಗಿ ಹೇಳಿದರು.
ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ ಶ್ರಮದಿಂದ ತಮ್ಮ ಗೆಲುವಿನ ಬಗ್ಗೆ ಆತ್ಮವಿಶ್ವಾಸ ಇತ್ತು ಎಂದು ತಿಳಿಸಿದ ಅವರು, ತಾಲೂಕಿನಲ್ಲಿ ಬಡವರಿಗೆ ಸೂರು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement