ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇನಾಂ ಭೂಮಿ ಸಮಸ್ಯೆ ಪರಿಹಾರಕ್ಕೆ ಹೋರಾಟ

Lingaraj Badiger
Updated On : 11 May 2013, 11:08 am

ಮೂಡಿಗೆರೆ: ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಪ್ರಯತ್ನದ ಫಲವಾಗಿ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಮತದಾರ ಆಯ್ಕಮ ಮಾಡಿರುವುದು ಸಂತಸ ತಂದಿದೆ ಎಂದು ಜೆಡಿಎಸ್ ಕ್ಷೇತ್ರಾಧ್ಯಕ್ಷ ಡಿ.ಆರ್.ಉಮಾಪತಿ ಹೇಳೀದರು.
 ಅವರು ಶುಕ್ರವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಡಳಿತಾರೂಢರ ವಿರುದ್ಧ ಬಂಡೆದ್ದಿದ್ದ ಮತದಾರರು ಬದಲಾವಣೆ ತಂದಿದ್ದಾರೆ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅವಿರತ ಶ್ರಮ ವಹಿಸಿದ್ದಾರೆ ಎಂದರು.
ಇನಾಂ ಭೂಮಿ ಸಮಸ್ಯೆ: ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವ ನಿವೇಶನ ರಹಿತರ ಮತ್ತು ಕಳಸ ಇನಾಂ ಭೂಮಿ ಸಮಸ್ಯೆ ಇತ್ಯರ್ಥಕ್ಕೆ ಪಕ್ಷ ತೀವ್ರ ಹೋರಾಟ ನಡೆಸಲಿದೆ. ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ಹಂತ, ಹಂತವಾಗಿ ಆದ್ಯತೆಯ ಮೇರೆಗೆ ಪರಿಹಾರ ಕಲ್ಪಿಸುವ ಪ್ರಯತ್ನ ಶಾಸಕರಿಂದ ನಡೆಯಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
  ಜನರಿಗೆ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಚಂರಂಡಿ, ಸರಕಾರದಿಂದ ಬರುವ ವಿವಿಧ ಸೌಕರ್ಯಗಳನ್ನು ಅರ್ಹ ರೀತಿಯಲ್ಲಿ ತಲುಪಿಸುವ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಜನರನ್ನು ತಲುಪುವಂತಾಗಬೇಕಿದೆ. ಹಿಂದಿನ ಅವಧಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದರು.
  ಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಕಾರ್ಯಕಾರಿಣಿ ಸದಸ್ಯ ಬಾಲಕೃಷ್ಣೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ರಂಜನ್ ಅಜೀತುಮ ಕುಮಾರ್, ಬಾಳೂರು ಅಜೀತ್ ಕುಮಾರ್, ಪಕ್ಷದ ವಕ್ತಾರ ಬಿ.ಸಿ.ಚಂದ್ರೇಗೌಡ, ದೇವರಾಜ್, ಉಮರಬ್ಬ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement