ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆ ಈಡೇರಿಸಲಿದೆ
ನರಸಿಂಹರಾಜಪುರ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪ್ರಜ್ಞಾವಂತ ಮತದಾರರು ಮತ ನೀಡಿದ್ದು ಕಾಂಗ್ರೆಸ್‌ಗೆ ನಿಶ್ಚಳ ಬಹುಮತ ಬಂದಿದೆ. ಮತದಾರರಿಗೆ ನೀಡಿದ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದ್ದಾರೆ.
ಹೇಳಿಕೆ ನೀಡಿ, ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರು ಅಲ್ಪ ಮತಗಳಿಂದ ಪರಾಭವಗೊಂಡರೂ 54,950 ಮತ ಪಡೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ. ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯನ್ನು ಸರ್ಕಾರದ ಮೂಲಕ ಈಡೇರಿಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದ್ದಾರೆ.