ವಿಠಲರಾವ್
ನರಸಿಂಹರಾಜಪುರ: ದತ್ತಪೀಠ ಸಂವರ್ದನ ಸಮಿತಿ ಪ್ರಧಾನ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷತ್ ಪ್ರಮುಖರಾಗಿದ್ದ ಬಾಳೆಹೊನ್ನೂರಿನ ಬಿ.ಎಸ್. ವಿಠಲರಾವ್ (76) ಶುಕ್ರವಾರ ಮಧ್ಯಾಹ್ನ ನರಸಿಂಹರಾಜಪುರದ ತೋಟದ ಮನೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, 4 ಗಂಡು ಮಕ್ಕಳು ಹಾಗೂ 3 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ದತ್ತ ಪೀಠದ ಮುಕ್ತಿಗಾಗಿ ವಿಠಲರಾವ್ ದತ್ತಪೀಠ ಸಂರ್ವದನ ಸಮಿತಿ ಹುಟ್ಟುಹಾಕಿ 15 ವರ್ಷಗಳ ಕಾಲ ಕಾನೂನಿನ ಹೋರಾಟ ನಡೆಸಿದ್ದರು. 3 ಅವಧಿಗೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ 2 ವರ್ಷಗಳ ಕಾಲ ಬಿಜೆಪಿ ರಾಷ್ಟ್ರೀಯ ನಾಯಕ ಆಡ್ವಾನಿಯವರೊಂದಿಗೆ ಜೈಲು ವಾಸ ಅನುಭವಿಸಿದ್ದರು. ವಾಜಪೇಯಿ ಅವರೊಂದಿಗೂ ವಿಠಲರಾವ್ ಅವರು ನಿಕಟ ಸಂಪರ್ಕ ಹೊಂದಿದ್ದರು. ಶಾಸಕ ಜೀವರಾಜ್, ಭಾನುಪ್ರಕಾಶ್, ಗಿರೀಶ್ ಪಟೇಲ್ ನಮನ ಸಲ್ಲಿಸಿದರು. ಪಾರ್ಥಿವ ಶರೀರವನ್ನು ಬಾಳೆಹೊನ್ನೂರಿನ ಮನೆಗೆ ತರಲಾಗಿದೆ. ಶನಿವಾರ ಬೆಳಿಗ್ಗೆ ಭದ್ರ ನದಿಯ ತಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.