ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆ ಬಸವಜಯಂತಿ ಆಚರಣೆ

Vishwanath S
Updated On : 12 May 2013, 12:09 pm

ಚಿಕ್ಕಮಗಳೂರು: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ 13 ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ಕಲಾಮಂದಿರದಲ್ಲಿ ಬಸವ ಜಯಂತಿ ಆಚರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ, ವಿಧಾನಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ವಿಧಾನಪರಿಷತ್ ಶಾಸಕಿ ಮೋಟಮ್ಮ, ಎ.ವಿ. ಗಾಯತ್ರಿ ಶಾಂತೇಗೌಡ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಎಂ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಮಾಲಿನಿಬಾಯಿ ರಾಜಾನಾಯ್ಕ, ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಬಸವರಾಜು, ವೀರಶೈವ ಸಂಘದ ಅಧ್ಯಕ್ಷೆ ಗೌರಮ್ಮ ಬಸವೇಗೌಡ ಇತರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement