ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿನಿಲಯ ಮೂಡಿಗೆರೆ, ಬಾಲಕರ ವಿದ್ಯಾರ್ಥಿನಿಲಯ ಮೂಡಿಗೆರೆ, ದಾರದಹಳ್ಳಿ, ಗೋಣಿಬೀಡು, ಕಳಸ ಹಾಗೂ ಗಿರಿಜನ ಆಶ್ರಮ ಶಾಲೆ ಹೊಸಪುರ, ಹೊರನಾಡು, ಸಂಸೆ, ಕಳಸ ಇಲ್ಲಿ ಸೇರ್ಪಡೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸಲು ಮೇ 25 ಅಂತಿಮ ದಿನ, ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಫಾರಂಗಳಿಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯ ಅಥವಾ ತಾಲ್ಲೂಕು ಸಮಾಜಕಲ್ಯಾಣಾಧಿಕಾರಿಗಳ ಕಚೇರಿ ಮೂಡಿಗೆರೆ ಇಲ್ಲಿಗೆ ಸಂಪರ್ಕಿಸಬಹುದು.