ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸರ್ಕಾರಿ ಕಾಲೇಜು ಶೇ.95 ಫಲಿತಾಂಶ

Vishwanath S
Updated On : 12 May 2013, 12:10 pm

ಚಿಕ್ಕಮಗಳೂರು: ಮೂಡಿಗೆರೆಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 95.48ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆ ಬರೆದ 155 ವಿದ್ಯಾರ್ಥಿಗಳಲ್ಲಿ 148 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಈ ಪೈಕಿ 5 ಅತ್ಯುತ್ತಮ, 80 ಪ್ರಥಮ ಶ್ರೇಣಿ, 44 ದ್ವಿತೀಯ, 19 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಎಂ. ರುದ್ರಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಾ ವಿಭಾಗದಲ್ಲಿ ಶೇ. 96.6, ವಾಣಿಜ್ಯ ವಿಭಾಗದಲ್ಲಿ ಶೇ. 94 ಫಲಿತಾಂಶ ಬಂದಿದ್ದು, ನಾಲ್ಕು ವಿದ್ಯಾರ್ಥಿನಿಯರು ಲೆಕ್ಕಶಾಸ್ತ್ರದಲ್ಲಿ 100ಕ್ಕೆ 100 ರಷ್ಟು ಅಂಕಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಶಿಲ್ಪಶೆಟ್ಟಿ 539 (ಶೇ.89.83) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ತಂದುಕೊಟ್ಟಿರುವ ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement