ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗುರುಕೃಪಾ ಶಾಲೆಗೆ ಶೇ.100

Lingaraj Badiger
Updated On : 13 May 2013, 2:57 am

ಕ.ಪ್ರ.ವಾರ್ತೆ ಕಡೂರು  ಮೇ 12
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಗಿರಿಯಾಪುರದ ಶ್ರೀ ಗುರುಕೃಪಾ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ ಲಭಿಸಿದೆ.
ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆಗೆ ಕುಳಿತಿದ್ದ 47 ವಿದ್ಯಾರ್ಥಿಗಳಲ್ಲಿ ಬಿ.ಬಿ. ಮಾರುತಿ ಪ್ರಸಾದ್ 582 ಅಂಕ (ಶೇ.93.12), ಯು. ರೇಣುಕಾರಾಧ್ಯ 581 ಅಂಕ ಶೇ. (92.96), ಕೆ.ಜೆ. ಶುಭ 575 ಅಂಕ (ಶೇ.92)), ಎಸ್. ತೇಜಸ್ವಿನಿ 573 (ಶೇ. 91.68) ಸೇರಿದಂತೆ ಒಟ್ಟು 19 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಒಟ್ಟು 73 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಸದ್ದಾಂ ಆರ್. ಮಲ್ಲಬಾದ್ 575 ಅಂಕ ಪಡೆದು ಶೇ.92ರಷ್ಟು ಫಲಿತಾಂಶ ಗಳಿಸುವ ಮೂಲಕ ವಿದ್ಯಾರ್ಥಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 40 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, 19 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 13 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅತಿ ಹೆಚ್ಚು ಅಂಕ ಗಳಿಸಿದ ಎಲ್ಲ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ, ಬೋಧಕೇತರ ವರ್ಗ ಮತ್ತು ನಾಗರಿಕರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement