ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪ್ರತಿಭೆ ಪ್ರದರ್ಶನಕ್ಕೆ ಕಾರ್ಯಕ್ರಮ ಸೂಕ್ತ ವೇದಿಕೆ

Lingaraj Badiger
Updated On : 15 May 2013, 10:50 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 14
ಸಾಂಸ್ಕೃತಿಕ ಚಟುವಟಿಕೆಗಳಿಂದ ಮನಸ್ಸು ಹಗುರವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ಹೊರ ತರಲು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಗೌರವ ಕಾರ್ಯದರ್ಶಿ ಸಂದೀಪ್ ಕರೆ ನೀಡಿದ್ದಾರೆ.
ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಆರಂಭಗೊಂಡ ರಾಜ್ಯಮಟ್ಟದ ಎರಡು ದಿನಗಳ ಸಾಂಸ್ಕೃತಿಕ ಉತ್ಸವ ಚುಂಚನ- 13 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಹಲವು ಪ್ರತಿಭೆಗಳಿರುತ್ತವೆ. ಅವುಗಳನ್ನು ಹೊರ ತರಲು ಅವಕಾಶ ಕಡಿಮೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ. ಸುಬ್ರಾಯ ಮಾತನಾಡಿ, ಶಿಸ್ತು, ಸಂಯಮ, ಬದ್ಧತೆ ಮತ್ತು ಕಾರ್ಯಕಾರಿ ಗುಣಗಳು ವಿದ್ಯಾರ್ಥಿಗಳಲ್ಲಿ ಅತಿ ಮುಖ್ಯ ಎಂದರು.
ಮನರಂಜನೆ ಮನಸ್ಸಿನ ಆತ್ಮ ಶಾಂತಿಗೆ ದಾರಿ ದೀಪ. ಕಲಾವಿದನ ಅಂತರಾಳದಲ್ಲಿ ಹುದುಗಿರುವ ನಿಜವಾದ ಕಲೆಯನ್ನು ಇಂತಹ ವೇದಿಕೆಯಲ್ಲಿ ಪ್ರದರ್ಶಿಸಿದರೆ ಎಲ್ಲರೂ ಇಷ್ಟಪಡುತ್ತಾರೆ ಎಂದರು.
 ಭರತನಾಟ್ಯ ಒಂದು ಶಾಸ್ತ್ರೀಯ ಕಲೆ ಇದನ್ನು ಪ್ರದರ್ಶಿಸಲು ನುರಿತ ಕಲಾವಿದರಿಂದ ಮಾತ್ರ ಸಾಧ್ಯ. ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಎಚ್.ಜಿ. ಶೇಖರ್ ಮತ್ತಿತರರು ಈ ಸಂದರ್ಭದಲ್ಲ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement