ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ
ಚಿಕ್ಕಮಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 81ನೇ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಜೆಡಿಎಸ್ ಮತ್ತು ಸೇವಾದಳ ಕಾರ್ಯಕರ್ತರಿಂದ ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಎಂ.ಜಿ. ರಸ್ತೆಯ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ನಂತರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯಕರ್ತರಿಂದ ರಕ್ತದಾನ, ನೇತ್ರದಾನ ನೋಂದಣಿ ಮತ್ತು ರೋಗಿಗಳಿಗೆ ಹಣ್ಣು ವಿತರಣಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಜೆಡಿಎಸ್ ಮತ್ತು ಸೇವಾದಳ ಮುಖಂಡ ಜಿ. ರವಿಕುಮಾರ್ ಮನವಿ ಮಾಡಿದ್ದಾರೆ.