ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

22ರಂದು ಏತ ನೀರಾವರಿ ಹೋರಾಟ ಸಮಿತಿ ಸಭೆ

Rashmi Kasaragodu
Updated On : 20 May 2013, 11:04 am

ದಾವಣಗೆರೆ:  ದಾವಣಗೆರೆ, ಜಗಳೂರು ತಾಲೂಕಿನ 22 ಕೆರೆಗಳ ಏತ ನೀರಾವರಿ ಹೋರಾಟ ಸಮಿತಿ ಸಭೆ ಮೇ 22ರಂದು ನಗರದ ರೋಟರಿ ಬಾಲಭವನದ ಮೊದಲ ಮಹಡಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಡಾ. ಜಿ. ಮಂಜುನಾಥ ಗೌಡ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಮಧ್ಯಾಹ್ನ 2.30ಕ್ಕೆ ನಡೆಯುವ ಸಭೆಯಲ್ಲಿ 22 ಕೆರೆಗಳ ಏತ ನೀರಾವರಿ ಕಾಮಗಾರಿ, ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಿದ್ದು, ಏತ ನೀರಾವರಿ ಯೋಜನೆ ವ್ಯಾಪ್ತಿಯ ಗ್ರಾಮಗಳ ರೈತರು, ರೈತ ಮುಖಂಡರು, ಗ್ರಾಮಸ್ಥರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸೂಕ್ತ ಸಲಹೆ, ಸೂಚನೆ
ನೀಡುವಂತೆ ಸಮಿತಿ ಪ್ರಧಾನ ಕಾರ್ಯದರ್ಶಿ ಹುಲಿಕಟ್ಟೆ ಎಲ್. ಕೊಟ್ರೇಶನಾಯ್ಕ, ಸಹ ಕಾರ್ಯದರ್ಶಿ ಶಿವಕುಮಾರ ತುಪ್ಪದಹಳ್ಳಿ ಮತ್ತಿತರರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement