ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ'

Rashmi Kasaragodu
Updated On : 20 May 2013, 11:04 am

ತರೀಕೆರೆ: ಅಭಿವೃದ್ದಿ ಕೆಲಸ ಕಾರ್ಯಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿರುವ ಬಗ್ಗೆ ತಮಗೆ ಆತ್ಮತೃಪ್ತಿ ಇದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎನ್. ಮಂಜುನಾಥ್ ತಿಳಿಸಿದ್ದಾರೆ.
ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಂದರ್ಭದಲ್ಲಿ ಕನ್ನಡಪ್ರಭದೊಂದಿಗೆ ಅವರು ಮಾತನಾಡುತ್ತಿದ್ದರು.
ಸೀಮಿತ ಅವಧಿಯಲ್ಲಿ ಅಭಿವೃದ್ದಿ ಪಕ್ಷ ತಮ್ಮನ್ನು ಗುರುತಿಸಿ ಡಿಸೆಂಬರ್  2012 ರಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಸದಸ್ಯ ಮತ್ತು ಅಧ್ಯಕ್ಷರಾಗಿ ಪಕ್ಷ ನಿಷ್ಠೆಯಿಂದ ತಮಗೆ ನೀಡಿದ ಹುದ್ದೆಯಲ್ಲಿ ಅತ್ಯಂತ ಸೀಮಿತ ಅವಧಿಯಲ್ಲೇ ಹಲವಾರು ಅಭಿವೃದ್ದಿ ಕೆಲಸ ಕಾರ್ಯಗಳನ್ನು ನಿರ್ವಹಿಸಿದ್ದೇನೆ ಎಂದು ಅವರು ತಿಳಿಸಿದರು.
ಕ್ರಿಯಾಯೋಜನೆ: ತಾವು ಅಧಿಕಾರ ವಹಿಸಿಕೊಂಡಾಗ ಮಂಡಳಿಯಲ್ಲಿ ಕ್ರಿಯಾಯೋಜನೆ ಸಿದ್ದಗೊಂಡು ಅನುದಾನವು ಕೂಡ ಮುಗಿದಿದ್ದು,  ತಾವು ಅಂದಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೊಸದಾಗಿ ಹತ್ತು ಕೋಟಿ ರು.ಮಂಜೂರು ಮಾಡಲು ಮನವಿ ಮಾಡಿದ್ದು, ಈ ನಡುವೆ ಚುನಾವಣೆ ನೀತಿಸಂಹಿತೆ ಅನುಷ್ಠಾನಕ್ಕೆ ಬಂತು, ಆದರೂ ತಾವು ಕಚೇರಿಯಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸಿ, ಮಂಡಳಿಯ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಅಭಿವೃದ್ದಿ ಕೆಲಸ ಕಾರ್ಯಗಳಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿ ಅದನ್ನು ಕಾರ್ಯಗತಗೊಳಿಸಲಾಗಿದೆ ಎಂದು ಅವರು ತಿಳಿಸಿದರು.   
ಆರ್.ಡಿ. ಕೊಪ್ಪ, ತರೀಕೆರೆ, ಬುಕ್ಕಾಂಬುದಿ ಇತ್ಯಾದಿ  ಕಡೆ ಅನೇಕ ಅಭಿವೃದ್ದಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗಿದೆ ಮತ್ತು ತಮಗೆ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪಕ್ಷದ ಮುಖಂಡರಿಗೂ ಸರ್ಕಾರಕ್ಕೂ ತಮ್ಮ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಅರ್ಪಿಸಿ, ಎಲ್ಲರ ವಿಶ್ವಾಸ ಮತ್ತು ನಂಬಿಕೆಗೆ ಚ್ಯುತಿ ಬಾರದ ರೀತಿ ಕಾರ್ಯ ನಿರ್ವಹಿಸಿದ ಬಗ್ಗೆ ನನಗೆ ಸಂತೋಷ ಇದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement