ವಿದ್ಯಾರ್ಥಿ ವೇತನಕ್ಕೆ ಆಧಾರ್ ಕಡ್ಡಾಯ
ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಶಾಲಾ, ಕಾಲೇಜು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಖಾತೆ ಹೊಂದುವುದನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ನಂಬರ್, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಅವುಗಳ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕೆಂದು ಚಿಕ್ಕಮಗಳೂರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.