ವಿದ್ಯಾರ್ಥಿನಿಲಯ ಅರ್ಜಿ ಆಹ್ವಾನ
ನರಸಿಂಹರಾಜಪುರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ ಮತ್ತು ಅನುದಾನ ಪಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ. ನರಸಿಂಹರಾಜಪುರ, ಮುತ್ತಿನಕೊಪ್ಪ, ಬಾಳೆಹೊನ್ನೂರಿನ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ, ನರಸಿಂಹರಾಜಪುರ, ಬಾಳೆಹೊನ್ನೂರು, ಮೂಡುಬಾಗಿಲು, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ನರಸಿಂಹರಾಜಪುರದ ಜ್ಯೋತಿಭವನ ಬಾಲಕಿಯರ ವಿದ್ಯಾರ್ಥಿನಿಲಯ, ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ಶಿವಾನಂದ ಬಾಲಕರ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡಲಾಗುವುದು.
ಜೂನ್ 10 ಕೊನೆಯ ದಿನವಾಗಿದ್ದು, ಮಾಹಿತಿಗಾಗಿ ಸಂಬಂಧಿಸಿದ ವಿದ್ಯಾರ್ಥಿನಿಲಯ ನರಸಿಂಹರಾಜಪುರ ತಾಲೂಕಿನ ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿಗಳ ಸಂಪರ್ಕಿಸಲು ತಿಳಿಸಿದೆ.