ಇಲಾಖೆ ಶುದ್ಧಗೊಳಿಸುವುದೇ ನನ್ನ ಗುರಿ: ಕಿಮ್ಮನೆ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಮೇ 20
ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿಕೊಂಡಿದ್ದು, ಮೊದಲು ಅದನ್ನು ಭ್ರಷ್ಟಾಚಾರ ರಹಿತ ಇಲಾಖೆಯಾಗಿ ಪರಿವರ್ತಿಸುವುದು ನನ್ನ ಗುರಿ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಸೋಮವರ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಇಲಾಖೆ ಮಾಡುವುದರೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಉತ್ತಮ ಗುಣಮಟ್ಟ: ಕೂಲಿ ಮಾಡುವವರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡದಿದ್ದರೆ, ಖಾಸಗಿ ಶಾಲೆಗಳಿಗೆ ಹೋಗುತ್ತಾರೆ. ಮೊದಲು ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನ ಮಾಡುತ್ತೇನೆ. ಇಲ್ಲವಾದರೆ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಸ್ಥಿತಿ ತಲುಪುತ್ತವೆ ಎಂದು ತಿಳಿಸಿದರು.