ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮೋಟಮ್ಮಗೆ ಸಚಿವ ಸ್ಥಾನಕ್ಕೆ ಆಗ್ರಹ

Rashmi Kasaragodu
Updated On : 21 May 2013, 11:47 am

ಕ.ಪ್ರ.ವಾರ್ತೆ   ಚಿಕ್ಕಮಗಳೂರು   ಮೇ 20
ವಿ.ಪ. ಸದಸ್ಯೆ ಮೋಟಮ್ಮ ಅವರಿಗೆ  ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳು ಮೇ 22 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿವೆ.
 ಅಂದು ಪಕ್ಷದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ದಲಿತ ಸಂಘಟನೆ ಮುಖಂಡ ಹೊನ್ನಪ್ಪ  ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ  ಬಹುಜನರ ನಿರೀಕ್ಷೆಯಂತೆ ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಈವರೆಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ವಾಡಿಕೆಯಾಗಿತ್ತು. ಈ ಬಾರಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಗಾದಿಯಿಂದ ವಂಚಿಸಲಾಗಿದೆ. ಈ ಬಾರಿ ಕಾಂಗ್ರೆಸ್‌ಗೆ ಶೇ. 70 ರಷ್ಟು ಮತ ನೀಡಿದ ದಲಿತರು ಅದರಲ್ಲೂ ಪರಿಶಿಷ್ಟ ಜಾತಿಯವರನ್ನು ಅಧಿಕಾರದಿಂದ ದೂರ ಇಟ್ಟಿರುವುದನ್ನು ಸಂಘಟನೆ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ವಿ.ಪ. ವಿರೋಧ ಪಕ್ಷದ ನಾಯಕಿ ಮೋಟಮ್ಮ ಅವರಿಗೆ ಮಂತ್ರಿ ಸ್ಥಾನ ನೀಡದೇ ವಂಚಿಸಲಾಗಿದೆ. ಇದರ ಹಿಂದೆ ಹಲವು ರಾಜಕೀಯ ಕುತಂತ್ರಿಗಳು ಕೆಲಸ ಮಾಡಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ ಮೋಟಮ್ಮ ಅವರೇ ಕಾರಣ ಎಂದು ಹೇಳುತ್ತಿರುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರು ಅವರ ಹೊಣೆಗಾರಿಕೆ ಏನೆಂಬುದನ್ನು ಅರಿತು ಮಾತನಾಡಬೇಕು.
ಜಿಲ್ಲೆಯ ಇನ್ನುಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರುವುದಕ್ಕೆ ಇದರ ಹೊಣೆ ಹೊತ್ತು ಪಕ್ಷದ ಜಿಲ್ಲಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement