ರವಿಗೆ ಸನ್ಮಾನ
ಚಿಕ್ಕಮಗಳೂರು: ಶಾಸಕ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ಜಿಲ್ಲಾ ಮುದ್ರಣಕಾರರ ಸಂಘದಿಂದ ಸೋಮವಾರ ಅವರ ಗೃಹ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ನರೇಂದ್ರ, ಪ್ರಧಾನ ಕಾರ್ಯದರ್ಶಿ ಎಚ್.ಬಿ. ಗೋಪಿನಾಥ್, ಉಪಾಧ್ಯಕ್ಷ ಹಾಲಪ್ಪಶೆಟ್ಟಿ, ಖಜಾಂಚಿ ನವೀನ್, ಸಹ ಕಾರ್ಯದರ್ಶಿ ಲೋಕೇಶ್, ಸಂಘಟನಾ ಕಾರ್ಯದರ್ಶಿ ಪ್ರಕಾಶ್, ನಿರ್ದೇಶಕ ಚಂದ್ರಶೇಖರ್, ಸ್ವಾಮಿ, ಗಿರೀಶ ಕುಮಾರ್, ಸತೀಶ್ ಅವರು ಶಾಸಕರನ್ನು ಗೌರವಿಸಿ ಶುಭ ಹಾರೈಸಿದರು. ಶಾಸಕ ಸಿ.ಟಿ. ರವಿ, ಊರಿನ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ದುಡಿಯುವ ವರ್ಗದ ಹಿತರಕ್ಷಣೆಗಾಗಿ ಸರ್ಕಾರ ಕೈಗೊಂಡಿರುವ ಯೋಜನೆಗಳ ಸಮರ್ಪಕ ಜಾರಿಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.