ಮುಂದುವರಿದ ಮಳೆ
ತರೀಕೆರೆ: ಕಳೆದ ಮೂರು ದಿವಸದ ಹಿಂದಷ್ಟೆ ತುಸು ಸಮಾಧಾನಕರ ಮಳೆಯಾಗಿದ್ದ ತರೀಕೆರೆ ಪಟ್ಟಣ ಮತ್ತು ಸುತ್ತಮುತ್ತ ಸೋಮವಾರ ತಡರಾತ್ರಿ 12-30ಕ್ಕೆ ಮಿಂಚು ಗುಡುಗು ಸಹಿತ ಮತ್ತೆ 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯುತು.
ಪಟ್ಟಣದ ತಗ್ಗು ಪ್ರದೇಶಗಳಲ್ಲಿ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳ ಬಳಿ ರಸ್ತೆ, ಚರಂಡಿಗಳಲ್ಲಿ ನೀರು ತುಂಬಿ ಹರಿಯಿತು. ಮಿಂಚು ಗುಡುಗಿನಿಂದಾಗಿ ರಾತ್ರಿ ವಿದ್ಯುತ್ ವ್ಯತ್ಯಯವಾಗಿತ್ತು. ಸಮೀಪದ ಹಲಸೂರು, ಕೆಂಚಿಕೊಪ್ಪ, ರಂಗೇನಹಳ್ಳಿ ಸುತ್ತಮುತ್ತ ಸೋಮವಾರ ರಾತ್ರಿ ಮಳೆಯಾಗಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.