ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸಹಾಯ
ಕ.ಪ್ರ.ವಾರ್ತೆ, ಸಾಗರ, ಮೇ 21
ಹಾವು ಕಡಿದು ಮೃತಪಟ್ಟ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 50 ಸಾವಿರ ಸಹಾಯ ಧನವನ್ನು ಒದಗಿಸಲಾಗುವುದು ಎಂದು ಶಾಸಕ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯ, ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಅವರು ಅಲ್ಲಿನ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದರು.
ವಿಷಾದನೀಯ: ಇಂತಹ ವಾತಾವರಣದಲ್ಲಿ ವಿದ್ಯಾರ್ಥಿಗಳು ನೆಮ್ಮದಿಯ ವಿದ್ಯಾಭ್ಯಾಸ ನಡೆಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಶಿಕ್ಷಣವನ್ನು ಬಯಸಿ ಬೇರೆ ಊರುಗಳಿಂದ ಬರುವ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಉಳಿದುಕೊಂಡಿರುತ್ತಾರೆ.
ಅವರು ಉತ್ತಮ ಶಿಕ್ಷಣ ಪಡೆಯಲು ಸರ್ಕಾರ ಅನೇಕ ಯೋಜನೆಗಳು ಜಾರಿಗೆ ತಂದಿದ್ದರೂ ಅದು ಫಲಪ್ರದವಾಗದೆ ಇರುವುದು ವಿಷಾದನೀಯ ಹೇಳಿದರು.