ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅರ್ಜಿ ಆಹ್ವಾನ

Rashmi Kasaragodu
Updated On : 23 May 2013, 11:12 am

ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕ್ರೀಡೆ, ಸಂಸ್ಕೃತಿ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಿರುವ ಯುವಕ ಯುವತಿಯರಿಗೆ (ವೈಯಕ್ತಿಕ) ಹಾಗೂ ನೋಂದಾಯಿತ ಯುವಕ- ಯುವತಿ ಮಂಡಳಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸ್ವಚ್ಛತೆ ಕಾಪಾಡಲು ಸೂಚನೆ
ಚಿಕ್ಕಮಗಳೂರು ನಗರ ವ್ಯಾಪ್ತಿಯ ರಸ್ತೆ ಬದಿಯ ತಿಂಡಿ ತಿನಿಸುಗಳನ್ನು ತಯಾರಿಸುವ ತಳ್ಳುವ ಗಾಡಿ ಮಾಲೀಕರುಗಳು ಮತ್ತು ವ್ಯಾಪಾರಿಗಳು ತ್ಯಾಜ್ಯ ವಸ್ತುಗಳನ್ನು ಹಾಕಲು ಕಸದ ಬುಟ್ಟಿಯನ್ನು ಇಡದೆ ಸುತ್ತಮುತ್ತ ಗಲೀಜು ಮಾಡುವುದು, ತಿಂಡಿ ತಿನಿಸುಗಳನ್ನು ಹಾಕಿಕೊಡುವ ಪ್ಲೇಟ್‌ಗಳನ್ನು ಬಿಸಿ ನೀರಿನಿಂದ ಸ್ವಚ್ಛ ಮಾಡದೆ ಕೊಡುವುದು, ಕಲಬೆರಕೆ ಎಣ್ಣೆ ಮತ್ತು ಪದಾರ್ಥ್ಥಗಳನ್ನು ಗ್ರಾಹಕರಿಗೆ ಕೊಡುತ್ತಿರುವುದಲ್ಲದೆ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವುದು ನಗರಸಭೆಯ ಗಮನಕ್ಕೆ ಬಂದಿದೆ. ವ್ಯಾಪಾರ ಮಾಡುವ ಮಾಲಿಕರು ಸ್ವಚ್ಛವಾದ ಪ್ಲೇಟ್ ಕೊಡುವುದು, ತ್ಯಾಜ್ಯ ವಿಲೇವಾರಿಯನ್ನು ಸರಿಯಾಗಿ ನಿರ್ವಹಿಸುವುದರ ಜೊತೆಗೆ  ಗ್ರಾಹಕರಿಗೆ ಶುಚಿಯಾದ ಆಹಾರ ಪದಾರ್ಥಗಳನ್ನು ನೀಡಲು ಸೂಚಿಸಲಾಗಿದೆ. ನಗರಸಭೆ ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಲಿದ್ದು, ನ್ಯೂನತೆಗಳು ಕಂಡುಬಂದಲ್ಲಿ 500 ಗಳಿಂದ 5000 ಗಳವರೆಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments