ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಪದವಿ ಶಿಕ್ಷಣದಲ್ಲಿ ಅತಿಹೆಚ್ಚು ಅಂಕಗಳಿಸಿರುವ ಭಾವಸಾರ ಕ್ಷತ್ರೀಯ ಸಮುದಾಯದ ವಿದ್ಯಾರ್ಥಿಗಳಿಗೆ ಭಾವಸಾರ್ ವಿಷನ್ ಇಂಡಿಯಾ ಸಂಸ್ಥೆ ಜೂನ್ 2 ರಂದು ನಗರದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಿವೆ.
ಅಂದು ನಡೆಯಲಿರುವ ಸಮಾರಂಭದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಜೊತೆಗೆ ಪ್ರಮಾಣ ಪತ್ರವನ್ನು ನೀಡಿ ಪುರಸ್ಕರಿಸಲಿದ್ದು ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು 99021- 78801 ಸಂಖ್ಯೆಗೆ ಸಂಪರ್ಕಿಸುವಂತೆ ಸಂಸ್ಥೆಯ ಕಾರ್ಯದರ್ಶಿ ಹೆಬ್ಬಾರೆ ಸಂತೋಷ್ ರಾವ್ ಮನವಿ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ; ಹರ್ಷಿತಗೆ 586 ಅಂಕ
ತರೀಕೆರೆ: ಎಸ್‌ಎಸ್‌ಎಲ್‌ಸಿಯಲ್ಲಿ ತರೀಕೆರೆಯ ಎಂ. ಹರ್ಷಿತ 586 ಅಂಕ (ಶೇ.94) ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.