ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಟೀ ಮಾರುವ ದಂಪತಿ ಮಗಳ ಸಾಧನೆ

Rashmi Kasaragodu
Updated On : 24 May 2013, 11:18 am

ಕ.ಪ್ರ.ವಾರ್ತೆ ಟಿ ಬೀರೂರು ಟಿ  ಮೇ 23
ಪಟ್ಟಣದ ಪಟ್ಟಾಭಿರಾಮ ಚಂದ್ರಮೌಳೇಶ್ವರ ದೇವಾಲಯದಲ್ಲಿ ಶಂಕರ ಜಯಂತಿ ಅಂಗವಾಗಿ ಜರುಗಿದ ಸರಳ ಸಮಾರಂಭದಲ್ಲಿ ವಿಪ್ರ ಸಮಾಜದಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಎಎಂಆರ್ ಸರ್ಕಾರಿ ಬಾಲಕಿಯರ ಫ್ರೌಢಶಾಲೆ ವಿದ್ಯಾರ್ಥಿನಿ ಧನ್ಯಶ್ರೀ ತನ್ನ ಕುಟುಂಬದ ಸಂಕಷ್ಟಗಳ ಸರಮಾಲೆಯಲ್ಲಿಯೂ ಕಲಿಕೆಗೆ ಒತ್ತುಕೊಟ್ಟು 575 ಅಂಕ ಪಡೆದು ಶೇ.91.68 ರಷ್ಟು  ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ತಂದೆ ತಾಯಿ ಸಂತೆಯಲ್ಲಿ ಕ್ಯಾಂಟಿನ್ ನಡೆಸಿ ಜೀವನ ನಿರ್ವಹಣೆ ಮಾಡುತ್ತಿದ್ದರೂ ಮಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ನೆರವಾಗಿದ್ದಾರೆ. ಫಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಧನ್ಯಶ್ರೀ, ತಂದೆ ತಾಯಿಗಳ ಆಶೀರ್ವಾದ, ಪ್ರೋತ್ಸಾಹ, ಕಠಿಣ ಪರಿಶ್ರಮ ಮತ್ತು ಶಿಕ್ಷಕ ವೃಂದದ ಉತ್ತಮ ಭೋಧನೆಯೇ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಕಾರಣವಾಯಿತು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿಪ್ರ ಸಮಾಜದ ಶಿವರಾಮಶಾಸ್ತ್ರಿ, ಕುಮಾರಸ್ವಾಮಿ, ಕೆ.ಎಸ್.   ಸೋಮಶೇಖರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement