ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಆರ್ಥಿಕ ಪ್ರಗತಿಗೆ ಬ್ಯಾಂಕ್ ನೆರವು ಅಗತ್ಯ

Lingaraj Badiger
Updated On : 25 May 2013, 10:59 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 24
ನಿರುದ್ಯೋಗಿಗಳು, ಬಡವರು ಆರ್ಥಿಕವಾಗಿ ಸಬಲರಾಗಬೇಕಾದರೆ ಅವರಿಗೆ ಬ್ಯಾಂಕುಗಳ ನೆರವಿನ ಅಗತ್ಯವಿದೆ ಎಂದು ಎಸ್‌ಟಿಜೆ ಕಾಲೇಜಿನ ಗ್ರಂಥಪಾಲಕರಾದ ಡಾ. ಎಫ್.ಜಿ. ಪಾಟೀಲ್ ಹೇಳಿದ್ದಾರೆ.
ಇಲ್ಲಿನ ಬೇಲೂರು ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನಲ್ಲಿ ಗುರುವಾರ ನಡೆದ ಬ್ಯಾಂಕಿನ ಗ್ರಾಹಕರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ದೇಶ ಹಿಂದುಳಿದ ರಾಷ್ಟ್ರ ಇಲ್ಲಿ ಪ್ರಮುಖವಾಗಿ ಕಾಡುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಬೇಕಾದರೆ ಸ್ವಯಂ ಉದ್ಯೋಗ ಕೈಗೊಳ್ಳಬೇಕಾದ ಅಗತ್ಯವಿದೆ. ಆದರೆ, ಇದಕ್ಕೆ ಹಣದ ನೆರವು ಬೇಕಾಗಿದ್ದು, ಇದರ ಸಹಾಯ ಇಲ್ಲದೆ ಮುಂದೇನೂ ಮಾಡಲು ಸಾಧ್ಯವಾಗದು. ಈ ಉದ್ದೇಶದಿಂದಲೇ ಬ್ಯಾಂಕ್‌ಗಳು ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು ನೀಡುತ್ತಿವೆ ಎಂದರು.
ಬ್ಯಾಂಕ್‌ಗಳು ಕೊಟ್ಟ ಸಾಲವನ್ನು ಸ್ವಯಂ ಉದ್ಯೋಗ ಕೈಗೊಳ್ಳಲು ಮಾತ್ರ ಬಳಕೆ ಮಾಡಿದರೆ ಉದ್ದೇಶ ಈಡೇರಲಿದೆ. ಈ ಹಣವನ್ನು ಮದುವೆ ಸೇರಿದಂತೆ ಇತರೆ ಕಾರ್ಯಗಳಿಗೆ ಬಳಕೆ ಮಾಡಿದರೆ ಆರ್ಥಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಲು ಜೀವನದಲ್ಲಿ ಮುಂದೆ ಬರಲು ಆಗುವುದಿಲ್ಲ ಎಂದು ಕಿವಿ ಮಾತು ಹೇಳಿದ ಪಾಟೀಲ್, ಅದೇ ರೀತಿ ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿದರೆ ಬೇರೆಯವರಿಗೂ ಸಾಲ ನೀಡಿ, ಅವರ ಆರ್ಥಿಕ ಮಟ್ಟವನ್ನು ಸುಧಾರಣೆಯಾಗಲು ಸಹಾಯವಾಗುತ್ತದೆ ಎಂದು ಹೇಳಿದರು.
ಬ್ಯಾಂಕಿನ ಸಹ ವ್ಯವಸ್ಥಾಪಕ ಮಿತೀನ್ ರಾಜ್ ಮಾತನಾಡಿ, ಸಿಂಡಿಕೇಟ್ ಬ್ಯಾಂಕ್ ದೇಶದಲ್ಲಿ 3 ಸಾವಿರ ಶಾಖೆಗಳನ್ನು ಹೊಂದಿದ್ದು, ಈ ವರ್ಷದಲ್ಲಿ 200 ಶಾಖೆಗಳನ್ನು ತೆರೆಯಲು ಉದ್ದೇಶಿಸಿದೆ ಎಂದರು.

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ನರಸಿಂಹರಾಜಪುರ: ಅರಳಿಕೊಪ್ಪ ಗ್ರಾಮದ ಹದಗಳಲೆ ನಾಗರತ್ನ (35) ಗುರುವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 ತಕ್ಷಣ ಮನೆಯವರು ಅವರನ್ನು ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ನಾಗರತ್ನ ಮೃತಪಟ್ಟಿದ್ದಾರೆ. ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ನರಸಿಂಹರಾಜಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement