ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯುತ್ ಕೊರತೆ: ನೀರಿನ ಸಮಸ್ಯೆ ಉಲ್ಬಣ

Lingaraj Badiger
Updated On : 25 May 2013, 10:59 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 24
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿದ್ಯುತ್ ಇಲ್ಲದೆ ಹೆಚ್ಚಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕುಡಿಯುವ ನೀರಿಗೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರನ್ನು ಒದಗಿಸುವಂತೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಬಸವರಾಜ್ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ತಾಲೂಕು ಪಂಚಾಯಿತಿಗೆ 1.40 ಕೋಟಿ ಅನುದಾನ ಬಂದಿದೆ. ಎಲ್ಲಾ ಸದಸ್ಯರುಗಳು ಅಗತ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸುವಂತೆ ತಿಳಿಸಿದರು.
ಸಮರ್ಪಕ ಮಾಹಿತಿ: ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ಗೊಬ್ಬರ ಮತ್ತು ಸಮರ್ಪಕ ಮಾಹಿತಿಯನ್ನು ಆಯಾ ರೈತ ಸಂಪರ್ಕ ಕೇಂದ್ರಗಳಿಂದ ನೀಡಬೇಕು. ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆಗಳ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಲಾಗುವುದು ಎಂದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಹೆಚ್.ಎಸ್. ಪುಟ್ಟೇಗೌಡ ಮಾತನಾಡಿ, ಸರ್ಕಾರದ ಯೋಜನೆಗಳ ಮಾಹಿತಿಯನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಸಮಸ್ಯೆ ಇದ್ದು, ಕಂಬದ ತಂತಿಗಳೆಲ್ಲ ಜೋತು ಬಿದ್ದಿವೆ. ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ: ತಾ.ಪಂ. ಸದಸ್ಯ ಕೃಷ್ಣೇಗೌಡ ಮಾತನಾಡಿ, ಮೆಸ್ಕಾಂ ಇಲಾಖೆಯಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗೆ ಸ್ವೀಕರಿಸುತ್ತಿಲ್ಲ. ಇನ್ನು ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು. ಸರ್ಕಾರಿ ನೌಕರರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ನಾಮಕಾವಸ್ಥೆ ಸಭೆಗಳಾಗದೆ ಏನಾದರೂ ಫಲಿತಾಂಶ ಬರುವಂತೆ ಸಭೆಗಳು ನಡೆಯಬೇಕು ಎಂದರು.
ತಾ.ಪಂ. ಮಾಜಿ ಅಧ್ಯಕ್ಷ ಕನಕರಾಜ್ ಮಾತನಾಡಿ, ಕರ್ತಿಕೆರೆ ಶಾಲೆ ಹಿಂದೆ ಅತ್ಯುತ್ತಮವಾಗಿತ್ತು. ಇಂದು ಮುಖ್ಯ ಶಿಕ್ಷಕಿಯಾಗಿ ಆಗಮಿಸಿರುವ ಶಿಕ್ಷಕಿ ಅತ್ಯಂತ ಬೇಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದಾಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಅವರು ಮಾತನಾಡಿ ಕಾನೂನು ರೀತಿ ವಿಚಾರಣೆ ಮಾಡಿ ಅಮಾನತ್ತು ಮಾಡಲಾಗುವುದೆಂದು ಸಭೆಗೆ ತಿಳಿಸಿದರು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಧರ್ಮಯ್ಯ, ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ, ಮಾಜಿ ಉಪಾಧ್ಯಕ್ಷ ಯೋಗಾನಂದ್, ಸದಸ್ಯರಾದ ಗಂಗಯ್ಯ, ಮಹೇಶ್  ಹಾಗೂ ಇತರೆ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement