ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಂತಿಕೆ: ಎರಡು ಶಾಲೆಗಳಿಗೆ ನೋಟಿಸ್

Vishwanath S
Updated On : 26 May 2013, 2:21 am

ಚಿಕ್ಕಮಗಳೂರು: ಶಾಲೆಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರಿನನ್ವಯ ನಗರದ ಎರಡು ಖಾಸಗಿ ಶಾಲೆಗಳಿಗೆ ಶನಿವಾರ ನೋಟಿಸ್ ಜಾರಿ ಮಾಡಲಾಗಿದೆ.  ಇಲ್ಲಿನ ಸಾಯಿ ಏಂಜೆಲ್ಸ್ ಹಾಗೂ ಸೆಂಟ್ ಮೇರಿಸ್ ಶಾಲೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
 ನಗರದ ಸಾಯಿ ಏಂಜೆಲ್ಸ್ ಹಾಗೂ ಸೆಂಟ್ ಮೇರಿಸ್ ಶಾಲೆಗಳು ಸೇರಿದಂತೆ ಇತರೆ ಶಾಲೆಗಳಲ್ಲಿ ಹೆಚ್ಚು ಡೊನೇಷನ್ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ಬಂದಿದ್ದವು. ಅದೇ ರೀತಿ ಪತ್ರಿಕೆಯಲ್ಲಿ ವರದಿ ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಆದೇಶದ ಮೇರೆಗೆ 2 ಶಾಲೆಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಸಿಬಿಎಸ್‌ಇ ಪಠ್ಯ: ಈ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯ ಕ್ರಮದಂತೆ ಶಿಕ್ಷಣ ನೀಡಲಾಗುತ್ತಿದೆ. ಸಿಬಿಎಸ್‌ಇ ಪಠ್ಯಕ್ಕೆ ನಿಗದಿಪಡಿಸಿರುವ ಶುಲ್ಕದ ವಿವರ ತರಿಸಿಕೊಳ್ಳಲಾಗುತ್ತಿದೆ. ಯಾವುದೇ ಖಾಸಗಿ ಶಾಲೆ ಪ್ರವೇಶ ಶುಲ್ಕ ನಿಗದಿಪಡಿಸಬೇಕಾದರೆ ಪೋಷಕರ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಅದೇ ರೀತಿ ಆಡಳಿತ ಮಂಡಳಿಯಲ್ಲಿ ಶುಲ್ಕ ನಿಗದಿಪಡಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
 ಈ ಶಾಲೆಗಳು ನೀಡುವ ವರದಿಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಶಿಕ್ಷಣ ನಿರ್ಮಾಣ ಸಮಿತಿಯ ಮುಂದಿಡಲಾಗುವುದು.  ದೂರಿನ ಹಿನ್ನೆಲೆಯಲ್ಲಿ ಮೇ 27ರಂದು ಖಾಸಗಿ ಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement