ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿನಿಲಯಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

Vishwanath S
Updated On : 26 May 2013, 2:23 am

ಕ.ಪ್ರ.ವಾರ್ತೆ, ಕೊಪ್ಪ, ಮೇ 25
ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳಿಗೆ 2012-13 ನೇ ಸಾಲಿಗೆ ಖಾಲಿ ಉಳಿದಿರುವ ಸ್ಥಾನ ಭರ್ತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಕೊಪ್ಪ, ಹರಿಹರಪುರ, ಕಮ್ಮರಡಿ, ಬಸರಿಕಟ್ಟೆಯ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಮತ್ತು  ಕೊಪ್ಪದ ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಗಿರಿಜನ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 6ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
 ಮೇಗೂರು, ಮೆಣಸಿನಹಾಡ್ಯ, ಬಸರಿಕಟ್ಟೆಯ ಗಿರಿಜನ ಆಶ್ರಮ ಶಾಲೆಗಳಿಗೆ 1ರಿಂದ5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬೇಕಾಗಿದೆ. ಕೊಪ್ಪದ ಸಾರ್ವಜನಿಕ ಕಾಲೇಜು ಬಾಲಕ, ಬಾಲಕಿಯರ ವಿದ್ಯಾರ್ಥಿನಿಯಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಜಿ ಸಲ್ಲಿಸುವರು ಈ ಹಿಂದಿನ ತರಗತಿಯ ಅಂಕಪಟ್ಟಿ, ಜಾತಿ ಮತ್ತು ವರಮಾನ ಪತ್ರ, 3ಪೋಸ್ಟ್ ಕಾರ್ಡ್ ಮತ್ತು 3ಪೋಟೋಗಳೊಂದಿಗೆ ವಿದ್ಯಾರ್ಥಿ ನಿಲಯಕ್ಕೆ ಬಂದು ನಿಗದಿತ ಅರ್ಜಿ ನಮೂನೆಯನ್ನು ಜೂನ್ 10 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಮಾಹಿತಿಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಚೇರಿಗೆ ಮತ್ತು 08265222898 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement