ನಕ್ಸಲ್ ದಾಳಿಗೆ ಖಂಡನೆ
ತರೀಕೆರೆ: ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಕ್ಸಲೀಯರಿಂದ ನೆಡೆದ ದಾಳಿಯನ್ನು ಬಿಜೆಪಿ ತಾಲೂಕು ಅಧ್ಯಕ್ಷ ಆರ್. ದೇವಾನಂದ್ ಖಂಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನೆಡೆದ ದಾಳಿ ಪ್ರಜಾಪ್ರಭುತ್ವದ ಮೇಲೆ ನೆಡೆದ ದಾಳಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಕ್ಸಲೀಯರಿಗೆ ಅವಕಾಶವಿಲ್ಲ. ನಕ್ಸಲರು ನಕ್ಸಲ್‌ವಾದವನ್ನು ಬದಿಗಿಟ್ಟು, ರಾಷ್ಟ್ರೀಯ ಮುಖ್ಯವಾಹಿನಿಗೆ ಸೇರಬೇಕು, ಬಂದೂಕು ನಳಿಕೆಯಿಂದ ಯಾವುದೇ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ, ಇಂತಹ ಘಟನೆಗಳನ್ನು ಎಲ್ಲ ರಾಜಕೀಯ ಪಕ್ಷಗಳು ಖಂಡಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ತಾಲೂಕು ಬಿಜೆಪಿ ಆಗ್ರಹಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ನಾಳೆ ಮಾಹಿತಿ, ಕಾರ್ಯಾಗಾರ
ಚಿಕ್ಕಮಗಳೂರು: ನಗರದ ಜಿಲ್ಲಾ ಬ್ರಾಹ್ಮಣ ಮಹಾಸಭಾ ಹಾಗೂ ಎಂಇಎಸ್ ಛೇಂಬರ್ ಆಫ್ ಕಾಮರ್ಸ್ ಆಶ್ರಯದಲ್ಲಿ ದ್ವಿತೀಯ ಪಿಯುಸಿ ಹಾಗೂ ಸಿಇಟಿ ಪರೀಕ್ಷೆ ಬರೆಯ ವಿಜ್ಞಾನ ವಿದ್ಯಾರ್ಥಿಗಳಿಗೆ ಸೀಟ್ ಮ್ಯಾಟ್ರಿಕ್ಸ್ ಬಗ್ಗೆ ಮೇ 28 ರಂದು ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ಶ್ರೀಧರ್ ಹೇಳಿ ಕೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಂ.ಇ.ಎಸ್. ಶಾಲೆಯ ಸುಂದರಮ್ಮ ಶಂಕರಮೂರ್ತಿ ಸಭಾಂಗಣದಲ್ಲಿ ಈ ಮಾರ್ಗದರ್ಶನನ ಕಾರ್ಯಕ್ರಮ ನಡೆಯಲಿದೆ.