ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಭ್ರಷ್ಟಾಚಾರ ರಹಿತ ಆಡಳಿತ ಪಕ್ಷದ ಗುರಿ

Lingaraj Badiger
Updated On : 27 May 2013, 10:56 am

ಚಿಕ್ಕಮಗಳೂರು: ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಕಾಂಗ್ರೆಸ್‌ನ ಮೂಲ ಗುರಿ ಎಂದು ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಕಂಡು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಇದೀಗ ಕಾಂಗ್ರೆಸ್ ಬಿಜೆಪಿಯ ದಾರಿಯಲ್ಲಿ ಸಾಗಿದರೆ ಅರ್ಥ ಇರುವುದಿಲ್ಲ. ಅದುದರಿಂದ ಕರ್ನಾಟಕ ರಾಜ್ಯದಲ್ಲಿ ಪಾರದರ್ಶಕ, ಶುದ್ದ ಆಡಳಿತ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರು ಕರೆ ನೀಡಿದ್ದಾರೆ. ಇದನ್ನು ಯಾರೂ ಕೂಡ ಮರೆಯಬಾರದು ಎಂದು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕಿವಿ ಮಾತು ಹೇಳಿದರು. ರಾಜಕೀಯ ಪಕ್ಷಕ್ಕೆ ಅಧಿಕಾರ ಮಾತ್ರ ಗುರಿ ಆಗಬಾರದು. ಹಾಗೆನಾದರೂ ಅಂದುಕೊಂಡಿದ್ದೆಯಾದಲ್ಲಿ ಪಕ್ಷ ಕಟ್ಟಲು ಸಾಧ್ಯವಿಲ್ಲ. ಕಾಂಗ್ರೆಸ್‌ನಲ್ಲಿ ನಾಯಕರ ಕೊರತೆ ಇಲ್ಲ. ಬಿಜೆಪಿಯ ದುರಾಡಳಿತ ನೋಡಿ ಜನ ಬೇಸತ್ತ ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರೇ ಕಾರಣ ಎಂದರು. ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತರನ್ನಾಗಿ ಬಂದೆ, ಶಾಸಕನಾಗಿ, ಮಂತ್ರಿಯಾಗುವ ಕನಸು ಕಂಡಿರಲಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement