ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಾಜಪೇಯಿ ವಸತಿ ಶಾಲೆ ಮಂಜೂರು

Lingaraj Badiger
Updated On : 28 May 2013, 10:30 am

ಕಪ್ರ ವಾರ್ತೆ, ಚಿಕ್ಕಮಗಳೂರು,  ಮೇ 27
ನಗರದಲ್ಲಿ 6ನೇ ತರಗತಿಯಿಂದ ಪಿಯುಸಿವರೆಗೆ ಅಟಲ್ ಬಿಹಾರಿ ವಾಜಪೇಯಿ ಮಾದರಿ ವಸತಿ ಶಾಲೆ ಮಂಜೂರಾಗಿದ್ದು ಈಗಿನ ಶೈಕ್ಷಣಿಕ ವರ್ಷದಿಂದಲೇ ಈ ಶಾಲೆ ಆರಂಭವಾಗಲಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ. ರವಿ ತಿಳಿಸಿದರು.
  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಶೈಕ್ಷಣಿಕ ವರ್ಷದಿಂದಲೇ ಆರಂಭಗೊಳ್ಳಲಿರುವ ವಸತಿ ಶಾಲೆ 80 ವಿದ್ಯಾರ್ಥಿಗಳೊಂದಿಗೆ ಶಾಲೆ ಆರಂಭವಾಗಲಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಪೋಷಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ. ವಸತಿ ಶಾಲೆಯಾಗಿರುವುದರಿಂದ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಸರ್ಕಾರದ ಎಲ್ಲ ರೀತಿಯ ವ್ಯವಸ್ಥೆಗಳು ಲಭ್ಯವಾಗಲಿವೆ. ಈ ಮಾದರಿ ವಸತಿ ಶಾಲೆಯ ಶಾಶ್ವತ ಕಟ್ಟಡಕ್ಕಾಗಿ 10 ಎಕರೆ ಪ್ರದೇಶವನ್ನು ನೀಡುವಂತೆ ಜಿಲ್ಲಾಧಿಕಾರಿಗಳೊಂದಿಗೆ ಪ್ರಸ್ತಾಪಿಸಲಾಗಿದೆ.
ಶಿಕ್ಷಣ ಪದ್ದತಿ: ಈ ಶಾಲೆಯಲ್ಲಿ ಆಧುನಿಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು. 55 ಜನ ಭೋಧಕ ಮತ್ತು ಭೋಧಕೇತರ ಸಿಬ್ಬಂದಿ ಶಾಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದು ವಿದ್ಯಾರ್ಥಿಗಳು ಸದ್ಯಕ್ಕೆ ಖಾಸಗಿ ಕಟ್ಟಡದಲ್ಲಿ ವ್ಯಾಸಾಂಗ ಮಾಡಬೇಕಾಗಿದೆ. ಆಧುನಿಕ ಶಿಕ್ಷಣ ಪದ್ದತಿಯನ್ನು ಈ ಶಾಲೆಯಲ್ಲಿ ಅಳವಡಿಸುವ ಮೂಲಕ ಮಕ್ಕಳಿಗ ಶಿಕ್ಷಣ ನೀಡುವ ಉದ್ದೇಶ ಹೊಂದಿದ್ದು ಶೇ 50ರಷ್ಟು ದಲಿತ ವಿದ್ಯಾರ್ಥಿಗಳಿಗೆ ಪ್ರವೇಶದ ಅವಕಾಶ ವಿದ್ದು, ಬಾಲಕ ಬಾಲಕಿಯರು ಜೊತೆಗೂಡಿ ವಿದ್ಯಾಭ್ಯಾಸ ಮಾಡುವ ಈ ಮಾದರಿ ಶಾಲೆ ಆರಂಭಗೊಳ್ಳಲಿದೆ ಎಂದರು.
 ಬಿಜೆಪಿ ಸರ್ಕಾರದಲ್ಲಿ ತಾವು ಜಿಲ್ಲಾ ಕೇಂದ್ರಕ್ಕೆ ಮೆಡಿಕಲ್ ಕಾಲೇಜು, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜನ್ನು ಮಂಜೂರು ಮಾಡಿಸಿದ್ದೇನೆ. ತಾವು ಸಚಿವರಾಗಿದ್ದಾಗ ಮಂಜೂರು ಮಾಡಿಸಿರುವ ಈ ಕಾಲೇಜುಗಳು ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಆರಂಭಗೊಳ್ಳಲಿವೆ.
    ತಾವು ಜಿಲ್ಲೆಯ ಬಡ ಮತ್ತು ಮಧ್ಯಮ ವರ್ಗದ ಪೋಷಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎನ್ನುವ ಹಿತದೃಷ್ಟಿಯಿಂದ ತಾವು ಈ ಕಾಲೇಜುಗಳನ್ನು ಮಂಜೂರು ಮಾಡಿಸಿರುವುದಾಗಿ ಹೇಳಿದ ರವಿ, ಶೀಘ್ರದಲ್ಲಿಯೇ ಈ ಕಾಲೇಜುಗಳ ಆರಂಭಕ್ಕೆ ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement