ಕುಡಿಯುವ ನೀರಿನ ದುರ್ಬಳಕೆ: ಪ್ರತಿಭಟನೆ
ಶೃಂಗೇರಿ: ತಾಲೂಕಿನ ಮೆಣಸೆ ಪಂಚಾಯಿತಿ ಕಂಚೇಬೈಲು ಗ್ರಾಮದ ಹೊಸನಗರ ಕಾಲೋನಿಯಲ್ಲಿ ಕುಡಿಯುವ ನೀರಿನ ಸೌಲಭ್ಯವನ್ನು ವ್ಯಕ್ತಿಯೊಬ್ಬರು ದುರ್ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಕಾಲೋನಿ ಗ್ರಾಮಸ್ಥರು ಬುಧವಾರ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೂಡಲೇ ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಗ್ರಾಮಸ್ಥರಿಗೆ ನ್ಯಾಯದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರುಆಗ್ರಹಿಸಿದರು.
ಗ್ರಾಮಸ್ಥರ ಪರವಾಗಿ ಜನಪ್ರತಿನಿಧಿಗಳು ಮಾತನಾಡಿದರು.ತಾಪಂ ಸದ್ಯ ಎಂ.ಎಚ್. ನಟರಾಜ್, ರಾಜೇಶ್ ಶೆಟ್ಟಿ ಮತ್ತಿತರರು ಹಾಜರಿದ್ದರು.
ಅಧಿಕಾರಿಗಳ ಗ್ರಾಮಸ್ಥರ ಮನವಿ ಸ್ವೀಕರಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.