ಇಂದು ಸಂಸದ ಹೆಗ್ಡೆ ಪ್ರವಾಸ
ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತರೀಕೆರೆ ತಾಲೂಕಿನ ಶಿವನಿ ಹೋಬಳಿಯ ನಾರಾಯಣಪುರ, ತಿಮ್ಮಾಪುರ, ಅನುವನಹಳ್ಳಿ ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಚೀರನಹಳ್ಳಿ, ತ್ಯಾಗದಕಟ್ಟೆ , ಕಲ್ಲೇನಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ.
ಧರಣಿಗೆ ಬೆಂಬಲ
ತರೀಕೆರೆ: ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ವರ್ಗದ ಬಡ ಹೆಣ್ಣು ಮಕ್ಕಳಿಗೂ ವಿತರಿಸಬೇಕು ಎಂದು ಒತ್ತಾಯಿಸಿ ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಬೆಂಬಲವಾಗಿ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದಿದ್ದಾರೆ.