ಮದ್ಯ ಮಾರಾಟ ಮಳಿಗೆಗೆ ಬೆಂಕಿ: ನಷ್ಟ
ನರಸಿಂಹರಾಜಪುರ: ಸಿನಿಮಾ ಟಾಕೀಸ್ ರಸ್ತೆಯ ಸಮೀಪದಲ್ಲಿರುವ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಬಿದ್ದು ಲಕ್ಷಾಂತರ ರು. ನಷ್ಟ ಉಂಟಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ರಾತ್ರಿ ಸಮಯದಲ್ಲಿ ಮಳಿಗೆಯಲ್ಲಿ ಶಬ್ಧ ಬಂದಿದ್ದನ್ನು ಕೇಳಿದ ಅಕ್ಕ ಪಕ್ಕದ ಮನೆಯವರು ಭಾನುವಾರ ಬೆಳಿಗ್ಗೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಹೊಗೆ ಬರುತ್ತಿರುವುದು ಕಂಡು ಬಂದಿದೆ.
ತಕ್ಷಣ ಅಗ್ನಿ ಶ್ಯಾಮಕ ದಳ ಕರೆಸಿ ಬೆಂಕಿ ನಂದಿಸಲಾಯಿತು. ಕೆಲವು ಬಾಟಲುಗಳು ಸಂಪೂರ್ಣ ಸುಟ್ಟು ಹೋಗಿದ್ದು ಇನ್ನು ಕೆಲವು ಬಾಟಲಿಗಳಿಗೆ ಸ್ವಲ್ಪ ಹಾನಿಯಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಷ್ಟದ ಬಗ್ಗೆ ಅಂದಾಜು ಮಾಡುತ್ತಿದ್ದು 4.50 ಲಕ್ಷ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.