ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರಕ್ತದಾನ ಶಿಬಿರ

Lingaraj Badiger
Updated On : 11 Nov 2013, 10:54 am

ಚಿಕ್ಕಮಗಳೂರು: ಚೇತನಾ ಲೋಕ ಫೌಂಡೇಷನ್, ಮಿಮ್ಸ್ ಯುವ ಚೇತನಾ ಮತ್ತು ಜೆಸಿಐ ವತಿಯಿಂದ ನಗರದ ತೋಗರಿಹಂಕಲ್ ವೃತ್ತದಲ್ಲಿರುವ ಎಂಐಎಂಎಸ್ ಕಾಲೇಜಿನಲ್ಲಿ ಸೋಮವಾರ ರಕ್ತದಾನ ಶಿಬಿರ ನಡೆಯಲಿದೆ. ಡಿಸಿ ಶೇಖರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಸರ್ಜನ್ ಡಾ. ಆರ್. ದೊಡ್ಡಮಲ್ಲಪ್ಪ, ಡಾ. ಶಿವದತ್ ಮತ್ತು ಜೆಸಿಐ ವಲಯ ನಿರ್ದೇಶಕ ವೇಣುಗೋಪಾಲ್ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ಮತ್ತು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂಐಎಂಎಸ್ ನಿರ್ದೇಶಕರಾದ ಚೇತನ್‌ಕುಮಾರ್ ತಿಳಿಸಿದ್ದಾರೆ.
ಕಬಡ್ಡಿ ಪಂದ್ಯಾವಳಿ
ದೀಪಾವಳಿ ಹಬ್ಬದ ಪ್ರಯುಕ್ತ ಚಿಕ್ಕಮಗಳೂರು ತಾಲೂಕಿನ ಗಂಜಲಗೋಡು ಗ್ರಾಮದಲ್ಲಿ ನ.17 ರಂದು ರಾಜ್ಯಮಟ್ಟದ ಹೊನಲು- ಬೆಳಕಿನ ಕಬ್ಬಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಅವರು ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 30 ಸಾವಿರ, ದ್ವಿತೀಯ ಬಹುಮಾನ 20 ಸಾವಿರ ಹಾಗೂ ತೃತೀಯ ಬಹುಮಾನ 10 ಸಾವಿರ ಹಾಗೂ ಟ್ರೋಫಿ ನೀಡಲಾಗುವುದು.
ಶ್ರೀಗಳ ಹೆಸರು ಬಳಕೆಗೆ ಖಂಡನೆ
ನರಸಿಂಹರಾಜಪುರ: ಶಾಸಕ ಜೀವರಾಜ್‌ಗೆ ಎದುರಾಗಿರುವ ಅತ್ಯಾಚಾರ ಪ್ರಕರಣದಿಂದ ಪಾರಾಗಲು ಶೃಂಗೇರಿ ಶ್ರೀಗಳ ಹೆಸರನ್ನು ಬಳಕೆ ಮಾಡುತ್ತಿರುವುದನ್ನು  ಕ್ಷೇತ್ರ ಬ್ರಾಹ್ಮಣ ಪರಿಷತ್ ಖಂಡಿಸುತ್ತದೆ ಎಂದು ರಾಜೇಂದ್ರಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement