ಗುಣಮಟ್ಟದ ಕಾಮಗಾರಿ ನಿರ್ವಹಿಸಿ
ತರೀಕೆರೆ: ಶಾಶ್ವತವಾಗಿ ಉಳಿಯುವಂತಹ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ.
ಅವರು, ಸೋಮವಾರ ಸಮೀಪದ ಲಕ್ಕವಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಂಕಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.
ಈ ಭಾಗದಲ್ಲಿ ವಾಸಿಸುವ ಜನರಿಗೆ ಸರ್ಕಾರದ ಸವಲತ್ತುಗಳನ್ನು ಕೊಡಿಸುವುದರ ಮೂಲಕ ಅನುಕೂಲ ಮಾಡಿಕೊಡುವುದಾಗಿ ಅವರು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್, ಜಿ.ಪಂ.ಸದಸ್ಯ ಕೆ.ಪಿ. ಕುಮಾರ್, ತಾ.ಪಂ.ಸದಸ್ಯ ಅನ್ಬು, ಗ್ರಾ.ಪಂ.ಅಧ್ಯಕ್ಷೆ ರಾಜೇಶ್ವರಿ ನಂದಕುಮಾರ್, ಹೇಮಣ್ಣ, ನಂದಕುಮಾರ್, ಗ್ರಾಮಸ್ಥರು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.