'ಪಕ್ಷದ ಸಂಘಟನೆ ಜಿಲ್ಲಾ ಜತೆ ಸಮಸ್ಯೆಗಳ ಪರಿಹಾರಕ್ಕೆ ಒತ್ತು'
ಚಿಕ್ಕಮಗಳೂರು: ಪಕ್ಷದ ಸಂಘಟನೆಯ ಜತೆಗೆ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಸೋಮವಾರ ಕರೆದ ಪ್ರಥಮ ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯ ಕೆಲವು ಪ್ರಮುಖ ಸಮಸ್ಯೆಗಳ ಜತೆಗೆ ಪಕ್ಷದ ಸಂಘಟನೆಗೆ ತೆಗೆದುಕೊಳ್ಳಲಿರುವ ಕ್ರಮಗಳ ಬಗ್ಗೆ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ಮುಂಬರುವ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆ, ಸಹಕಾರದೊಂದಿಗೆ ಪಕ್ಷವನ್ನು ಜಿಲ್ಲೆಯಲ್ಲಿ ಇನ್ನಷ್ಟು ಸದೃಢಗೊಳಿಸಲಾಗುವುದು ಎಂದರು.
ಕೆಲವು ನಿಗಮ, ಮಂಡಳಿಗಳಿಗೆ ಪಕ್ಷದ ಮುಖಂಡರನ್ನು ನೇಮಕ ಮಾಡಲು ಅವರುಗಳ ಪಟ್ಟಿಯನ್ನು ಕಳುಹಿಸಿಕೊಡುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದು, ಅದರನ್ವಯ ಪಟ್ಟಿಯನ್ನು ಕಳುಹಿಸಲಾಗಿದೆ ಎಂದು ಹೇಳಿದರು.