ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಮೋದಿ ಪ್ರಧಾನಿ ಮಾಡಲು ಶ್ರಮಿಸಿ'

Rashmi Kasaragodu
Updated On : 12 Nov 2013, 11:33 am

ಚಿಕ್ಕಮಗಳೂರು: ಕಾರ್ಯಕರ್ತರು ಶ್ರಮಪಟ್ಟು ಕೆಲಸ ಮಾಡಿದಾಗ ಅತ್ಯಂತ ಎತ್ತರಕ್ಕೆ ಬೆಳೆದು ಪಕ್ಷದಲ್ಲಿ ಉತ್ತಮ ಸ್ಥಾನಮಾನಗಳಿಸಬಹುದು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
ಅಂಬಳೆ ಸಮುದಾಯ ಭವನದಲ್ಲಿ ಸೋಮವಾರ ನಡೆದ ಅಂಬಳೆ ಹೋಬಳಿ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಶಕ್ತಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಆಯ್ಕೆ ಮಾಡಲು ತಯಾರಾಗಿದೆ. ಈ ಬಾರಿಯ ಸಂಸದರ ಚುನಾವಣೆಯಲ್ಲಿ ಯಾವುದೇ ಜಾತಿ ಮತ ಬೇಧವಿಲ್ಲದೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ನಿರಂಜನ್ ಮಾತನಾಡಿ, ಪ್ರತಿ ಬೂತ್ ಮಟ್ಟದಲ್ಲೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನ.17ರಂದು ಮೋದಿಯವರ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಆಲ್ದೂರು ಮಂಡಳಿ ಅಧ್ಯಕ್ಷ ಮಂಜುನಾಥ್, ಮಾಜಿ ತಾ.ಪಂ. ಅಧ್ಯಕ್ಷ ಕನಕರಾಜ್ ಅರಸ್, ಎಂ.ಪಿ.ಎಂ.ಸಿ. ಅಧ್ಯಕ್ಷ ನಿಂಗೇಗೌಡ, ಗ್ರಾ.ಪಂ. ಅಧ್ಯಕ್ಷ ತಿರುಮಲರಾಜ್ ಅರಸ್  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement