ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಾಗುವಳಿ ಕುರಿತು ಸೂಕ್ತ ನಿರ್ಧಾರ

Rashmi Kasaragodu
Updated On : 12 Nov 2013, 11:35 am

ಶಿವಮೊಗ್ಗ: ಸಾಗುವಳಿ ವಿಚಾರ ಕುರಿತು ಮೊದಲಿನಿಂದಲೂ ಕಾಂಗ್ರೆಸ್ ನಲ್ಲಿ ಹೋರಾ ಟ ಮಾಡಿಕೊಂಡು ಬಂದಿ ದ್ದೇವೆ. ಆದ ರಿಂದ ನಮಗೆ ಹೆಚ್ಚು ಜವಾಬ್ದಾರಿ ಇದೆ. ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ರೈತರಿಗೆ ಭರವಸೆ ನೀಡಿದರು.  ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು, ರಾಜ್ಯಸರ್ಕಾರ ರೈತರ ಪರವಾಗಿದ್ದು, ರೈತ ಪರ ತೀರ್ಮಾನವನ್ನು ಕೈಗೊಳ್ಳುವುದರೊಂದಿಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು.
ಅಭಿವೃದ್ಧಿಗೆ ಬಳಕೆ: ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ಮಾತನಾಡಿ, ಕಟ್ಟಡ ನಿರ್ಮಾಣ ಕಾರ್ಮಿಕರ ಮಂಡಳಿಯಲ್ಲಿ ರು. 2,800 ಕೋಟಿ ಇದ್ದು, ಇದನ್ನು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಬಳಸಲಾಗುವುದು. ಇಂದಿನ ದಿನಗಳಲ್ಲಿ ಕಾರ್ಮಿಕರ ಶ್ರಮಕ್ಕೆ ಬೆಲೆ ಇಲ್ಲದಂತಾಗಿದ್ದು, ಕಾನೂನಿನ ಭದ್ರತೆ ಕೂಡಾ ಇಲ್ಲ. ರಾಜ್ಯದ ಪ್ರತಿಯೊಬ್ಬ ಕಟ್ಟಡ ಕಾರ್ಮಿಕನನ್ನೂ ಇಲಾಖೆ ವ್ಯಾಪ್ತಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 15 ಸಾವಿರ ನೋಂದಾಯಿತ ಕಾರ್ಮಿಕರಿದ್ದು, ಅವರೆಲ್ಲಾ ಮೂಲ ಸೌಕರ್ಯ ಕೊರತೆಯಿಂದ ನರಳುತ್ತಿದ್ದಾರೆ. ಅಂತಹವರನ್ನು ಗುರುತಿಸಿ, ಮುಖ್ಯವಾಹಿನಿಗೆ ತರುವ ಕೆಲಸ ಮೊದಲು ಆಗಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement