ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಹೊಸಪೇಟೆ: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಮರಾವತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೇರಿ ತಾಲೂಕಿನ ಬೆಲನಹಳ್ಳಿ ತಾಂಡಾದ ನರಸಿಂಹ ನಾಯ್ಕ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಐದು ತಿಂಗಳಿಂದ ತೋರಣಗಲ್ನ ಜಿಂದಾಲ್ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಾ, ನಗರದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಆದರೆ, ಜಿಗುಪ್ಸೆ ಹೊಂದಿ ತನ್ನ ರೂಂನಲ್ಲೇ ಸೋಮವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.