ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Rashmi Kasaragodu
Updated On : 13 Nov 2013, 11:26 am

ಚಿಕ್ಕಮಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಸಂಯುಕ್ತ ಆಶ್ರಯದಲ್ಲಿ  ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನ. 14 ರಂದು ಬೆಳಗ್ಗೆ 9 ಗಂಟೆಗೆ ನಗರ ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಶೇಖರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಲೇಖಕ ಶ್ರೀಕಂಠ ಕೂಡಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾಹಿತಿ ಮಲ್ಲಿಕಾರ್ಜುನ ಅಲೆಗಾವಿ, ಐಡಿಎಸ್ಜಿ ಕಾಲೇಜಿನ ಪ್ರಾಂಶುಪಾಲ ಬಸವರಾಜು, ಸರ್ಕಾರಿ ಜೂ.ಕಾಲೇಜು ಪ್ರಾಂಶುಪಾಲ ವಾಸುದೇವ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಕಸಾಪ ಕಾರ್ಯದರ್ಶಿ ವೆಂಕಟೇಶ್ ಭಾಗವಹಿಸಲಿದ್ದಾರೆ.
ಅರ್ಜಿ ಆಹ್ವಾನ
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ರಾಜ್ಯ ಸರ್ಕಾರದಲ್ಲಿ ಅತ್ತ್ಯುನ್ನತ ಸೇವೆ, ಸಾಧನೆ ಗೈದ ರಾಜ್ಯ ಸರ್ಕಾರಿ ನೌಕರರಿಗೆ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದಂದು ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯ ಮಟ್ಟದಲ್ಲಿ ನೀಡಲು ಅರ್ಹ ರಾಜ್ಯ ಸರ್ಕಾರಿ ನೌಕರರಿಂದ ಅರ್ಜಿ  ಆಹ್ವಾನಿಸಲಾಗಿದೆ.
ಜಿಲ್ಲಾವಾರು ಪ್ರಶಸ್ತಿಗೆ ನಾಮ ನಿರ್ದೇಶನ ಪಡೆಯಲು ಚಿಕ್ಕಮಗಳೂರು ಕಂದಾಯ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಆಯಾ ಇಲಾಖೆಯ ಮುಖ್ಯಸ್ಥರು ಮತ್ತು ನಾಗರಿಕರು ಸಹ ಉತ್ತಮ ಸರ್ಕಾರಿ ನೌಕರರ ಹೆಸರನ್ನು ಡಿ. 31 ರೊಳಗೆ ನೋಡಲ್ ಅಧಿಕಾರಿಗೆ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement