ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆಯಿಂದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ

Rashmi Kasaragodu
Updated On : 13 Nov 2013, 11:41 am

ಶಿವಮೊಗ್ಗ: ರೋವರ್ಸ್ ಕ್ಲಬ್ ಮತ್ತು ಜಿಲ್ಲಾ ಟೇಬಲ್ ಟೆನ್ನಿಸ್ ಸಂಸ್ಥೆ ಆಶ್ರಯದಲ್ಲಿ ನ.14ರಿಂದ 17ರವರೆಗೆ 23ನೇ ರಾಜ್ಯಮಟ್ಟದ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ರೋವರ್ಸ್ ಕ್ಲಬ್ ಅಧ್ಯಕ್ಷ ಎಚ್.ಡಿ. ರಮೇಶ್ ಶಾಸ್ತ್ರಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಲಬ್ ಕಳೆದ 40 ವರ್ಷಗಳಿಂದ ಸತತವಾಗಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಟೇಬಲ್ ಟೆನ್ನಿಸ್, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್ ್ಯಡ್ಮಿಂಟನ್ಮ್ತ್ತು ಜಿಲ್ಲಾ ಮಟ್ಟದ ಬಿಲಿಯರ್ಡ್ಸ್ ಕ್ರೀಡೆಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಟೆನ್ನಿಸ್ ಪಂದ್ಯಾವಳಿ ಆಯೋಜಿಸಲಾಗಿದೆ. ಪಾರ್ಕ್ ಬಡಾವಣೆಯಲ್ಲಿರುವ ರೋವರ್ಸ್ ಕ್ಲಬ್ ಆವರಣದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು.
ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 400 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ ಎಂದ ಅವರು, ನ.14ರಂದು ಸಂಜೆ 5ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಆಯನೂರು ಮಂಜನಾಥ್ ಉದ್ಘಾಟಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement